ಭಾನುವಾರ, ಜೂನ್ 7, 2020
22 °C

ಗ್ರಾ.ಪಂ. ಸದಸ್ಯನ ಕೊಲೆ ಪ್ರಕರಣ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮೀನಾರಾಯಣ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಎಂ.ಎನ್.ಮೋಹನ್ ಕುಮಾರ್ (28) ಎಂಬಾತನನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

2019ರಲ್ಲಿ ಲಕ್ಷ್ಮೀನಾರಾಯಣ ಅವರ ಕೊಲೆ ಆಗಿತ್ತು. ಅಂದಿನಿಂದಲೇ ಆರೋಪಿ ತಲೆಮರೆಸಿಕೊಂಡು ಓಡಾಡುತ್ತಿದ್ದ. ಇತ್ತೀಚೆಗೆ ಆತನ ಬಗ್ಗೆ ಮಾಹಿತಿ ಕಲೆಹಾಕಿದ್ದ ಸಿಸಿಬಿ ಪೊಲೀಸರು, ಆತನನ್ನು ಬಂಧಿಸಿ ಮಾದನಾಯಕನಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.

'ಬಂಧಿತ ಆರೋಪಿ ಮೋಹನ್ ಕುಮಾರ್, ಜೆ.ಟಿ.ವಿ ಹೆಸರಿನ ಯುಟ್ಯೂಬ್ ಚಾನೆಲ್ ನಡೆಸುತ್ತಿದ್ದ. ಅದರ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಆತನೇ ಆಗಿದ್ದ. ಜೊತೆಗೆ ಟಿ.ವಿ.6 ಎಂಬ ಯುಟ್ಯೂಬ್ ಚಾನೆಲ್ ಸಹ ಆರಂಭಿಸಿ ಸಿಇಒ ಆಗಿದ್ದ' ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು