ಬುಧವಾರ, ಜುಲೈ 28, 2021
24 °C

ಲೈಂಗಿಕ ದೌರ್ಜನ್ಯ ಎಸಗಿ ಕೊಲೆಗೆ ಯತ್ನ; ಪ್ರಜ್ಞಾಹೀನ ಸ್ಥಿತಿಯಲ್ಲಿ ಯುವತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಯುಧದಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಲಾಗಿದ್ದು, ಈ ಸಂಬಂಧ ಸ್ನೇಹಿತ ಬಬಿತ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

’20 ವರ್ಷದ ಯುವತಿ ಮೇಲೆ ಹಲ್ಲೆ ನಡೆದಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಾಯಿ ದೂರು ನೀಡಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.

‘ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ಓದುತ್ತಿರುವ ಯುವತಿಗೆ ಆರೋಪಿ ಬಬಿತ್ ಸ್ನೇಹಿತನಾಗಿದ್ದ. ಆಗಾಗ ಮನೆ ಬಳಿಯೂ ಬಂದು ಹೋಗುತ್ತಿದ್ದ. ಅಸಭ್ಯವಾಗಿ ವರ್ತಿಸಿ ಪೀಡಿಸಲಾರಂಭಿಸಿದ್ದ. ಆತನ ಸಹವಾಸವೇ ಬೇಡವೆಂದು ಯುವತಿ ಮಾತನಾಡಿಸುವುದನ್ನೇ ಬಿಟ್ಟಿದ್ದರು. ಅಷ್ಟಕ್ಕೆ ಕೋಪಗೊಂಡಿದ್ದ ಆರೋಪಿ, ಮನೆ ಬಳಿಯೂ ಹೋಗಿ ಗಲಾಟೆ ಮಾಡಿದ್ದ.’

‘ಜೂನ್ 7ರಂದು ಸ್ನೇಹಿತರೊಬ್ಬರ ಹುಟ್ಟುಹಬ್ಬದ ಆಚರಣೆಗೆ ಹೋಗಿದ್ದ ಯುವತಿಯನ್ನು ಅಪಹರಿಸಿದ್ದ ಆರೋಪಿ, ಕೊಠಡಿಯೊಂದರಲ್ಲಿ ಅಕ್ರಮ ಬಂಧನದಲ್ಲಿಟ್ಟಿದ್ದ. ಲೈಂಗಿಕ ದೌರ್ಜನ್ಯ ಎಸಗಿ ಹಲ್ಲೆ ಮಾಡಿದ್ದ. ಯುವತಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಬಳಿಕ ಆರೋಪಿಯೇ ಪೋಷಕರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದ’ ಎಂದು ಪೊಲೀಸರು ಹೇಳಿದರು.

‘ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನು ಪೋಷಕರೇ ಆಸ್ಪತ್ರೆಗೆ ಸೇರಿಸಿದ್ದಾರೆ. ಆಯುಧದಿಂದ ತಲೆಗೆ ಹೊಡೆದಿದ್ದರಿಂದ ಪ್ರಜ್ಞೆ ಹೋಗಿರುವುದಾಗಿ ವೈದ್ಯರು ತಿಳಿಸಿದ್ದಾರೆ’ ಎಂದೂ ವಿವರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು