ಶುಕ್ರವಾರ, ಸೆಪ್ಟೆಂಬರ್ 20, 2019
27 °C

ರಾಮನಗರ: ಹಣಕಾಸಿನ ವಿಚಾರದಲ್ಲಿ ವೈಷಮ್ಯ, ವ್ಯಕ್ತಿಯ ಬರ್ಬರ ಹತ್ಯೆ

Published:
Updated:

ರಾಮನಗರ: ತಾಲ್ಲೂಕಿನ ಯರೇಹಳ್ಳಿ ಗ್ರಾಮದ ಸಮೀಪ ಬುಧವಾರ ತಡರಾತ್ರಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಯರೇಹಳ್ಳಿ ನಿವಾಸಿ ಪುಟ್ಟರಾಜು (45) ಮೃತರು. ಅವರು ರಾತ್ರಿ ಬೈಕ್‌ನಲ್ಲಿ ಊರಿಗೆ ವಾಪಸ್‌ ಆಗುತ್ತಿದ್ದ ಸಂದರ್ಭ ಅಡ್ಡಗಟ್ಟಿದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿದ್ದಾರೆ. ಬಳಿಕ ತಲೆಯ ಮೇಲೆ ದೊಡ್ಡ ಕಲ್ಲು ಎತ್ತಿ ಹಾಕಿ ಗುರುತು ಸಿಗದಂತೆ ಮುಖವನ್ನು ಜಜ್ಜಿದ್ದಾರೆ. ಇದರಿಂದ ಪುಟ್ಟರಾಜು ಸ್ಥಳದಲ್ಲೇ ಸಾವನ್ನಪ್ಪಿದ್ದರು ಎನ್ನಲಾಗಿದೆ. ಬೆಳಿಗ್ಗೆ ಸ್ಥಳೀಯರು ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದರು.

ಹಣಕಾಸಿನ ವಿಚಾರದ ಸಲುವಾಗಿ ಪರಿಚಯಸ್ಥರೇ ಈ ಕೃತ್ಯ ಎಸಗಿಸಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಹತ್ಯೆ ನಡೆದ ಸ್ಥಳದಲ್ಲಿ ಬೈಕ್‌ ದೊರೆತಿದೆ. ಪ್ರಕರಣ ಸಂಬಂಧ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ರಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಮನಗರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post Comments (+)