ಬುಧವಾರ, ಏಪ್ರಿಲ್ 21, 2021
25 °C
ಅಪರಿಚಿತರಿಂದ ಮಠಕ್ಕೆ ಪತ್ರ

ನಿಜಗುಣಾನಂದ ಸ್ವಾಮೀಜಿ, ಎಚ್.ಡಿ.ಕುಮಾರಸ್ವಾಮಿ ಸೇರಿ 15 ಜನರಿಗೆ ಕೊಲೆ ಬೆದರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯ ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿ ಅವರನ್ನು ಇದೇ ತಿಂಗಳ 29ರಂದು ‘ಸಂಹಾರ’ ಮಾಡುವುದಾಗಿ ಬೆದರಿಕೆ ಪತ್ರವೊಂದು ದಾವಣಗೆರೆಯಿಂದ ಅವರ ಮಠಕ್ಕೆ ಬಂದಿದೆ.

ನಿಜಗುಣಾನಂದ ಸ್ವಾಮೀಜಿ ಅವರಲ್ಲದೇ, ಬಜರಂಗದಳದ ಮಾಜಿ ನಾಯಕ ಮಹೇಂದ್ರಕುಮಾರ್‌, ನಿಡುಮಾಮಿಡಿ ವೀರಭದ್ರ ಸ್ವಾಮೀಜಿ, ಚಿತ್ರನಟ ಪ್ರಕಾಶ್‌ ರಾಜ್‌, ಚೇತನಕುಮಾರ್‌, ಬಿ.ಟಿ. ಲಲಿತಾ ನಾಯಕ, ಮಹೇಶ್ಚಂದ್ರ ಗುರು, ಭಗವಾನ್‌, ದಿನೇಶ ಅಮಿನ್‌ ಮಟ್ಟು, ರೌಡಿ ಅಗ್ನಿ ಶ್ರೀಧರ್‌, ಬೃಂದಾ ಕಾರಟ್‌ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ 15 ಜನರನ್ನು ಹತ್ಯೆ ಮಾಡುವುದಾಗಿ ಅನಾಮಧೇಯ ಪತ್ರದಲ್ಲಿ ಬೆದರಿಕೆಯೊಡ್ಡಲಾಗಿದೆ.

2–3 ತಿಂಗಳಿನಿಂದಲೂ ಬೆದರಿಕೆ

‘ಶಿಷ್ಯಂದಿರ ದೂರವಾಣಿಗೆ ಕರೆ ಮಾಡಿ, ನನ್ನನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಕಳೆದ 2–3 ತಿಂಗಳಿನಲ್ಲಿ ಸುಮಾರು 3–4 ಸಲ ಕರೆಗಳು ಬಂದಿವೆ. ನನ್ನ ಜೊತೆ ನೇರವಾಗಿ ಮಾತನಾಡಿಲ್ಲ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರನ್ನು ಖುದ್ದು ಭೇಟಿಯಾಗಿ, ಗಮನಕ್ಕೆ ತಂದಿದ್ದೇನೆ. ಕಿತ್ತೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದೇನೆ’ ಎಂದು ನಿಜಗುಣಾನಂದ ಸ್ವಾಮೀಜಿ ‘ಪ್ರಜಾವಾಣಿ’ಗೆ ತಿಳಿಸಿದರು.

ವೈಚಾರಿಕತೆ ಕಾರಣ

‘ಹಲವು ವರ್ಷಗಳಿಂದ ಜನರಲ್ಲಿ ವೈಚಾರಿಕ ಪ್ರಜ್ಞೆ ಮೂಡಿಸುತ್ತಿದ್ದೇನೆ. ಮೂಢನಂಬಿಕೆ, ಕಂದಚಾರ ಹಾಗೂ ಅಂಧ ಶ್ರದ್ಧೆಯಲ್ಲಿ ತೊಡಗದಂತೆ ಜಾಗೃತಿ ಮೂಡಿಸುತ್ತಿದ್ದೇನೆ. ಇದನ್ನು ಅವರು (ಕರೆ ಮಾಡಿದವರು, ಪತ್ರ ಬರೆದವರು) ಸಹಿಸುತ್ತಿಲ್ಲ. ನನ್ನನ್ನು ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡುತ್ತಿದ್ದಾರೆ. ಇಂತಹ ಬೆದರಿಕೆಗೆ ನಾನು ಬಗ್ಗಲ್ಲ. ವೈಚಾರಿಕ ಪ್ರಜ್ಞೆ ಮೂಡಿಸುವ ಕಾಯಕವನ್ನು ಮುಂದುವರಿಸುತ್ತೇನೆ’ ಎಂದು ಸ್ವಾಮೀಜಿ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು