ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕೃತಿ ಆಹ್ವಾನ

Last Updated 17 ಜನವರಿ 2019, 17:24 IST
ಅಕ್ಷರ ಗಾತ್ರ

ಮಂಗಳೂರು: ಮುಸ್ಲಿಂ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ಪ್ರತಿವರ್ಷ ಪ್ರಕಟವಾಗುವ ಮುಸ್ಲಿಂ ಬರಹಗಾರರ ಅತ್ಯುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ ‘ಮುಸ್ಲಿಂ ಸಾಹಿತ್ಯ
ಪ್ರಶಸ್ತಿ’ಯನ್ನು ನೀಡುತ್ತಿದ್ದು, 2017ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಆಸಕ್ತ ಮುಸ್ಲಿಂ ಬರಹಗಾರರು ಕನ್ನಡದಲ್ಲಿ ಪ್ರಕಟಿತ 2017ನೇ ಸಾಲಿನ ಕೃತಿಯ ನಾಲ್ಕು ಪ್ರತಿಗಳನ್ನು ಇದೇ 31ರ ಒಳಗಾಗಿ ಸಂಚಾಲಕರು, ಮುಸ್ಲಿಂ ಸಾಹಿತ್ಯ ಪ್ರಶಸ್ತಿ, ಮುಸ್ಲಿಂ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು –575001 (ಸಂಪರ್ಕ: 9845054191, 0824 2410358) ಈ ವಿಳಾಸಕ್ಕೆ ಕಳುಹಿಸುವಂತೆ ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT