ಹುಣಸೂರು: ‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರ ವಿರೋಧವಿಲ್ಲ. ನಮಗೂ ರಾಮಮಂದಿರಕ್ಕೆ ಹೋಗಲು ಇಷ್ಟವಿದೆ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಪಟ್ಟಣದಲ್ಲಿ ಬುಧವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.
‘ಭಾರತದಲ್ಲಿ ಸ್ವಾತಂತ್ರ್ಯಪೂರ್ವ ಹಾಗೂ ನಂತರದ ದಿನಗಳಲ್ಲಿ ಹಿಂದೂ– ಮುಸ್ಲಿಮರು ಸಹಬಾಳ್ವೆ ನಡೆಸುತ್ತಿದ್ದಾರೆ. ಅಯೋಧ್ಯೆ ಸಮಸ್ಯೆಯನ್ನು ಹುಟ್ಟುಹಾಕಿದ್ದು ಬಿಜೆಪಿ. ಪ್ರಧಾನಿ ನರೇಂದ್ರ ಮೋದಿ ಅವರ ಐದು ವರ್ಷಗಳ ಆಡಳಿತಾವಧಿಯಲ್ಲಿ ರಾಮಮಂದಿರ ನಿರ್ಮಿಸಲು ಅವರಿಗೆ ಏಕೆ ಆಗಲಿಲ್ಲ. ಅವರಿಗೆ ಸಮಸ್ಯೆಗೆ ಅಂತ್ಯ ಹಾಡುವುದು ಬೇಕಿರಲಿಲ್ಲ’ ಎಂದು ಕುಟುಕಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.