ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ಕಾಯ್ದೆಯಿಂದ ಮುಸ್ಲಿಮರಿಗೆ ತೊಂದರೆ ಇಲ್ಲ: ಸಚಿವ ಪ್ರಹ್ಲಾದ ಜೋಶಿ

Last Updated 15 ಡಿಸೆಂಬರ್ 2019, 9:22 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪೌರತ್ವ (ತಿದ್ದುಪಡಿ) ಕಾಯ್ದೆಯಿಂದ ಈ ದೇಶದ ಮುಸ್ಲಿಮರಿಗೆ ಯಾವುದೇ ತೊಂದರೆಯಿಲ್ಲ, ಈ ಬಗ್ಗೆ ಮುಸ್ಲಿಮರು ಅನಗತ್ಯವಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಧಾರವಾಡ ಮತ್ತು ಬೆಳಗಾವಿ ಜಿಲ್ಲಾ ವ್ಯಾಪ್ತಿಯ ಸಿದ್ದಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರ ಕ್ರಮಕೈಗೊಂಡಿರುವ ಹಿನ್ನೆಲೆಯಲ್ಲಿ ಸಚಿವರನ್ನು ಸಿದ್ದಿಗಳು ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು ನೆರೆಹೊರೆಯ ದೇಶಗಳಲ್ಲಿ ಮತೀಯ ಹಿಂಸೆಯನ್ನು ತಾಳಲಾರದೆ ಭಾರತಕ್ಕೆ ವಲಸೆ ಬಂದವರಿಗೆ ಈ ದೇಶದ ಪೌರತ್ವ ನೀಡುವುದು ಕಾಯ್ದೆಯ ಉದ್ದೇಶವಾಗಿದೆಯೇ ಹೊರತು, ಯಾರ ಪೌರತ್ವವನ್ನು ಕಿತ್ತುಕೊಳ್ಳುವ ಉದ್ದೇಶವಿಲ್ಲ ಎಂದರು.

ದೇಶದಲ್ಲಿರುವ ಮುಸ್ಲಿಮರನ್ನು ಹೊರಹಾಕಲಾಗುತ್ತದೆ ಎಂಬ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷದವರು ಅನಗತ್ಯವಾಗಿ ಗೊಂದಲ ಸೃಷ್ಟಿಸಿ ದೇಶದಲ್ಲಿ ದೊಂಬಿ, ಗಲಾಟೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಅವರು ಉದ್ಧವ್ ಠಾಕ್ರೆ ಆಗಬಹುದೇ ಹೊರತು ಎಂದಿಗೂ ವೀರ ಸಾವರ್ಕರ್ ಆಗಲು ಸಾಧ್ಯವಿಲ್ಲ. ಕಾಂಗ್ರೆಸ್ ನವರು ಮತಿಭ್ರಮಣೆಯಾದವರಂತೆ ವರ್ತಿಸುತ್ತಿದ್ದಾರೆ ಎಂದರು.

ರಾಜ್ಯ ರಾಜಕಾರಣದ ಬಗ್ಗೆ ಮಾತನಾಡಿದ ಅವರುಹೊಸದಾಗಿ ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿಸುವ ಸಾಧ್ಯತೆ ಇಲ್ಲ. ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT