ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರ

Last Updated 13 ಮೇ 2020, 18:46 IST
ಅಕ್ಷರ ಗಾತ್ರ

ರಾಮನಗರ: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ವೆಂಟಿಲೇಟರ್‌ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ರೈ ಅವರು ಕ್ಯಾನ್ಸರ್‌ಗೆ ತುತ್ತಾಗಿದ್ದು, ವರ್ಷದಿಂದಲೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

‘ರೈ ಅವರು ಆರೋಗ್ಯದಿಂದ ಇದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಹಬ್ಬಿಸಿರುವ ಸುದ್ದಿ ಸುಳ್ಳು’ ಎಂದು ಅವರ ಸಂಬಂಧಿ ಪ್ರಕಾಶ್‌ ರೈ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರದಾಡುತ್ತಿರುವ ಸುದ್ದಿ ಸುಳ್ಳು

ಮುತ್ತಪ್ಪ ರೈ ಸ್ಥಿತಿ ಚಿಂತಾಜನಕವಾಗಿದ್ದು ನಾಳೆ ಆಸ್ಪತ್ರೆಯ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ ಎಂದು ಪೂರ್ವ ವಲಯ ಡಿಸಿಪಿ ಶರಣಪ್ಪ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವ ಅವರ ನಿಧನದ ಸುದ್ದಿ ಸುಳ್ಳು. ಕಳೆದ ಕೆಲವು ದಿನಗಳಿಂದ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶರಣಪ್ಪ ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT