ಬುಧವಾರ, ಏಪ್ರಿಲ್ 8, 2020
19 °C

ದೊರೆಸ್ವಾಮಿ ಟೀಕಿಸಿದ್ದ ಯತ್ನಾಳ ವಿರುದ್ಧ ಮೈಸೂರು ಪಾಲಿಕೆಯಲ್ಲಿ ನಿರ್ಣಯ ಮಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ದೊರೆಸ್ವಾಮಿ ಅವರು ಪಾಕಿಸ್ತಾನದ ಏಜೆಂಟ್‌, ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಟೀಕಿಸಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆಯಲ್ಲಿ ನಿರ್ಣಯ ಮಂಡಿಸಲಾಗಿದೆ. 

ಇದನ್ನೂ ಓದಿ: 

ಕಾಂಗ್ರೆಸ್‌–ಜೆಡಿಎಸ್‌ ಆಡಳಿತವಿರುವ ಪಾಲಿಕೆಯಲ್ಲಿ ಮಂಡನೆಯಾದ ಈ ನಿರ್ಣಯವನ್ನು ಬಿಜೆಪಿ ವಿರೋಧಿಸಿದೆ. ಬಿಜೆಪಿ ಸದಸ್ಯರು ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. 

ಸ್ವಾತಂತ್ರ್ಯ ಹೋರಾಟಗಾರ ವಿರುದ್ಧ ನೀಡಲಾದ ಹೇಳಿಕೆ ಕುರಿತು ಚರ್ಚೆ ಆಗಬೇಕು ಎಂದು ಕಾಂಗ್ರೆಸ್ ಸದಸ್ಯ ಅಯೂಬ್ ಖಾನ್ ಆಗ್ರಹಿಸಿದರು. ಆದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿದರ ಬಿಜೆಪಿ  ಸದಸ್ಯರು ಇದು ಚರ್ಚೆಯ ವೇದಿಕೆಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಈ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್, ಜೆಡಿಎಸ್ ಸದಸ್ಯರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. 

ಅದರೆ,  ಯತ್ನಾಳ್‌ ಅವರ ಹೇಳಿಕೆ ದೇಶದ ವಿಚಾರ, ಸ್ವಾತಂತ್ರ್ಯ ಹೋರಾಟಗಾರರ ವಿಚಾರವಾಗಿದ್ದು ಚರ್ಚೆಯಾಗಲೇಬೇಕು ಎಂದು ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದರು. 

ನಡಾವಳಿಯಂತೆ ಚರ್ಚೆ ನಡೆಸಲು ಮೇಯರ್ ತಸ್ನಿಂ ರೂಲಿಂಗ್ ಹೊರಡಿಸಿದರು. ‌

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು