ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಮೈಸೂರು, ಚಾಮರಾಜನಗರ, ಕೊಡಗು, ಮಂಗಳೂರು ಭಾಗದಲ್ಲಿ ಎಚ್ಚರಿಕೆ

ನಾಲ್ಕು ಜಿಲ್ಲೆಗಳಲ್ಲಿ ಕಟ್ಟೆಚ್ಚರ
Last Updated 3 ಫೆಬ್ರುವರಿ 2020, 19:04 IST
ಅಕ್ಷರ ಗಾತ್ರ

ಬೆಂಗಳೂರು: ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿನ ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಆದ್ದರಿಂದ ಆ ರಾಜ್ಯಕ್ಕೆ ಹೊಂದಿಕೊಂಡಿರುವ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆಯು ಕಟ್ಟೆಚ್ಚರ ವಹಿಸಿದ್ದು, ಗಡಿ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನುಕೈಗೊಂಡಿದೆ.

ಚೀನಾದ ವುಹಾನ್‌ನಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದ ಹುಬ್ಬಳ್ಳಿ ಕೇಶ್ವಾಪುರ ನಿವಾಸಿ ಸಂದೀಪ ಸಿದ್ಧಪ್ಪ ಚಳಸಂಗದ ಅವರು ನಗರಕ್ಕೆ ವಾಪಸ್ ಬಂದ ನಂತರಕೊರೊನಾ ವೈರಾಣು ಸೋಂಕಿನ ಲಕ್ಷಣಗಳು ಕಾಣಿಸಿ
ಕೊಂಡಿದ್ದು, ಕಿಮ್ಸ್‌ಗೆ ದಾಖಲಾಗಿದ್ದಾರೆ. ರಕ್ತದ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಕೇರಳದಲ್ಲಿ ಕೊರೊನಾ ವೈರಸ್ ಮೂರನೇ ಪ್ರಕರಣ ಬೆಳಕಿಗೆ ಬಂದ ನಂತರ ರಾಜ್ಯದ ಜನರಲ್ಲೂ ಆತಂಕ ಮನೆ ಮಾಡಿದೆ. ಸಾರ್ವಜನಿಕರ ಭೀತಿ ದೂರ ಮಾಡುವ ಪ್ರಯತ್ನದಲ್ಲಿ ಇಲಾಖೆ ಅಧಿಕಾರಿಗಳು ತೊಡಗಿಸಿಕೊಂಡಿದ್ದಾರೆ.

‘ಸುಮಾರು 23 ರಾಷ್ಟ್ರಗಳಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದ್ದು, ರಾಜ್ಯದಲ್ಲೂ ಸಾಕಷ್ಟು ಎಚ್ಚರಿಕೆ ವಹಿಸಿದ್ದು, ಕಣ್ಗಾವಲು ಇಡಲಾಗಿದೆ. ನಿಯಂತ್ರಣಕ್ಕೂ ಕ್ರಮ ಕೈಗೊಳ್ಳಲಾಗಿದೆ.ಕೊರೊನಾ ಬಾಧಿತ ಪ್ರದೇಶಗಳಿಂದ ಈವರೆಗೆ 51 ಮಂದಿ ಬಂದಿದ್ದು, ಅವರಲ್ಲಿ 46 ಜನರು ಮನೆಗಳಲ್ಲೇ ಇದ್ದು, ನಿಗಾ ವಹಿಸಲಾಗಿದೆ. ನಾಲ್ವರು ವಾಪಸಾಗಿದ್ದು, ಒಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT