ಮೈಸೂರು ಮೇಯರ್‌ ಚುನಾವಣೆ ನಾಳೆ: ಗರಿಗೆದರಿದ ಕುತೂಹಲ

7

ಮೈಸೂರು ಮೇಯರ್‌ ಚುನಾವಣೆ ನಾಳೆ: ಗರಿಗೆದರಿದ ಕುತೂಹಲ

Published:
Updated:

ಮೈಸೂರು: ಮಹಾನಗರ ಪಾಲಿಕೆ ಮೇಯರ್‌, ಉಪಮೇಯರ್‌ ಚುನಾವಣೆ ನಾಳೆ(ಶನಿವಾರ) ನಡೆಯಲಿದೆ. ಜೆಡಿಎಸ್‌ ಮತ್ತು ಕಾಂಗ್ರೆಸ್‌ ಜತೆಯಾಗಿ ಅಧಿಕಾರ ಹಿಡಿಯಲು ಸಿದ್ಧತೆ ನಡೆಸಿವೆ. ಆದರೆ ಮೇಯರ್‌ ಸ್ಥಾನ ನಮಗೇ ಬೇಕೆಂದು ಎರಡೂ ಪಕ್ಷಗಳ ಮುಖಂಡರು ಪಟ್ಟು ಹಿಡಿದಿರುವ ಕಾರಣ ಗೊಂದಲ ಮುಂದುವರಿದಿದೆ. 

ಮೊದಲ ಅವಧಿಗೆ ಮೇಯರ್‌ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಉಪಮೇಯರ್‌ ಸ್ಥಾನ ಹಿಂದುಳಿದ ವರ್ಗ ‘ಎ’ಗೆ ಮೀಸಲಾಗಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ನಲ್ಲಿ 10ಕ್ಕೂ ಅಧಿಕ ಆಕಾಂಕ್ಷಿಗಳಿದ್ದಾರೆ. 

ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರು ಮೇಯರ್ ಪಟ್ಟ ಜೆಡಿಎಸ್‌ಗೆ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಮೇಯರ್‌ ಸ್ಥಾನ ಜೆಡಿಎಸ್‌ಗೆ ದೊರೆಯದಿದ್ದರೆ, ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಸಾ.ರಾ.ಮಹೇಶ್‌ ತೆರೆದಿಟ್ಟಿದ್ದಾರೆ.

ರೆಸಾರ್ಟ್‌ಗೆ ಪಯಣ: ಜೆಡಿಎಸ್‌ ಮತ್ತು ಕಾಂಗ್ರೆಸ್‌ಗೆ ‘ಆಪರೇಷನ್‌ ಕಮಲ’ದ ಭಯವೂ ಆವರಿಸಿದೆ. ಈ ಕಾರಣ ಜೆಡಿಎಸ್‌ನ 18 ಸದಸ್ಯರು ಶುಕ್ರವಾರ ಮಧ್ಯಾಹ್ನ ಬಿಡದಿಯ ಈಗಲ್ಟನ್‌ ರೆಸಾರ್ಟ್‌ಗೆ ಪ್ರಯಾಣ ಬೆಳೆಸಿದ್ದಾರೆ. 

ನಾನು ತಲೆ ಹಾಕಲ್ಲ: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ‘ಮೇಯರ್‌ ಆಯ್ಕೆ ವಿಷಯದಲ್ಲಿ ನಾನು ತಲೆ ಹಾಕಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ.

‘ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಈ ವಿಷಯದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಜತೆ ಮಾತುಕತೆ ನಡೆಸಲಿದ್ದಾರೆ’ ಎಂದಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !