ಶುಕ್ರವಾರ, ನವೆಂಬರ್ 15, 2019
23 °C

ಬಂದೋಬಸ್ತ್‌ಗೆ ಬಂದಿದ್ದ ಕಾನ್‌ಸ್ಟೆಬಲ್ ಆತ್ಮಹತ್ಯೆ

Published:
Updated:

ಬೆಳಗಾವಿ: ಇಲ್ಲಿ ಮೊಹರಂ ಮತ್ತು ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಬಂದೋಬಸ್ತ್ ಕರ್ತವ್ಯಕ್ಕೆಂದು ನಿಯೋಜನೆಗೊಂಡಿದ್ದ ಪೊಲೀಸ್ ಕಾನ್‌ಸ್ಟೆಬಲ್‌ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರಿನ ಸಿಸಿಬಿ ಠಾಣೆಯಲ್ಲಿ ವಿ. ಪ್ರಮೋದ್ (28) ಮೃತರು.

‘ಸೆ. 8ರಂದು ಇಲ್ಲಿಗೆ ಬಂದಿದ್ದರು. ಗುರುವಾರ ರಾತ್ರಿ ನಡೆದ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆಯ ಬಂದೋಬಸ್ತ್‌ ಕೆಲಸ ಮುಗಿಸಿ, ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದ್ದ ಆಟೊನಗರದ ಕೆಐಎಡಿಬಿ ಸಭಾಂಗಣದಲ್ಲಿ ತಂಗಿದ್ದರು. ಅಲ್ಲಿನ ಬಾತ್‌ರೂಂನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಶುಕ್ರವಾರ ಬೆಳಿಗ್ಗೆ ಗೊತ್ತಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ’ ಎಂದು ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)