ಸೋಮವಾರ, ಮಾರ್ಚ್ 8, 2021
31 °C

ಕೋವಿಡ್ 19 ಮೈಸೂರು: ವಿದ್ಯಾರ್ಥಿಗಳ ನೆರವಿಗೆ ಒತ್ತಾಯಿಸಿ ಮೌನ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಹೊರರಾಜ್ಯ ಮತ್ತು ವಿದೇಶಗಳಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳನ್ನು ಉಚಿತವಾಗಿ ರಾಜ್ಯಕ್ಕೆ ಕರೆತರಬೇಕು ಎಂದು ಒತ್ತಾಯಿಸಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್ಎಸ್ಯುಐ)ಕಾರ್ಯಕರ್ತರು ಜಿಲ್ಲಾ ನ್ಯಾಯಾಲಯದ ಮಹಾತ್ಮ ಗಾಂಧಿ ಪುತ್ಥಳಿ ಎದುರು ಶುಕ್ರವಾರ ಮೌನ ಪ್ರತಿಭಟನೆ ನಡೆಸಿದರು.

ಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ನೆರವು‌ ನೀಡಬೇಕೆಂದು ಈಗಾಗಲೇ ಮಾಡಿರುವ ಮನವಿಗೆ ಸರ್ಕಾರ ಸ್ಪಂದಿಸಿಲ್ಲ ಎಂದು ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾಗೇಶ್ ಕಾರಿಯಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಮಯದಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದ ಪ್ರತಿಭಟನಾಕಾರರು ಅಂತರ ಕಾಯ್ದುಕೊಂಡಿದ್ದರು. ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು