ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ದಸರಾ ವೈಭವ: ಸಂಜೆ ವಿಶ್ವವಿಖ್ಯಾತ ಜಂಬೂಸವಾರಿ

Last Updated 8 ಅಕ್ಟೋಬರ್ 2019, 8:43 IST
ಅಕ್ಷರ ಗಾತ್ರ

ಮೈಸೂರು: ವಿಜಯದಶಮಿ ಮೆರವಣಿಗೆಗಾಗಿ ಸಿಂಗಾರಗೊಂಡಿರುವ ಮೈಸೂರಿನಲ್ಲಿ ಸಡಗರ ಮುಗಿಲು ಮುಟ್ಟಿದೆ. ಜಂಬೂಸವಾರಿಯ ವೈಭವವನ್ನು ಕಣ್ತುಂಬಿಕೊಳ್ಳಲು, ಚಾಮುಂಡೇಶ್ವರಿ ದೇವಿಯ ಕಣ್ತುಂಬಿಕೊಂಡು ಭಕ್ತಿ ಭಾವದಲ್ಲಿ ಮಿಂದೇಳಲು ಜನ ಕಾತರದಿಂದ ಕಾದಿದ್ದಾರೆ.

ಸೋಮವಾರದ ಆಯುಧಪೂಜೆ ಸಡಗರ ಮುಗಿದಿದ್ದು, ಇಂದುವಿಜಯದಶಮಿ ಸಂಭ್ರಮ. ಮಂಗಳವಾರ ಮಧ್ಯಾಹ್ನ 2.15ರಿಂದ 2.58ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನಡೆಯಲಿದೆ. ಬಳಿಕ ವಿಜಯದಶಮಿ ಮೆರವಣಿಗೆ ಆರಂಭವಾಗಲಿದೆ. ಅಂಬಾರಿಯಲ್ಲಿ ಪ್ರತಿಷ್ಠಾಪನೆಯಾಗುವ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಸಂಜೆ 4.31ರಿಂದ 4.57ರ ಒಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪುಷ್ಪಾರ್ಚನೆ ಮಾಡಲಿದ್ದಾರೆ.

ನಂತರ ಮೈಸೂರಿನ ರಾಜಮಾರ್ಗದಲ್ಲಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತುಅರ್ಜುನ ಸಾಗಲಿದ್ದಾನೆ.

ರಾಜ್ಯದ 30 ಜಿಲ್ಲೆಗಳ ಸ್ತಬ್ದಚಿತ್ರಗಳ ಜೊತೆಗೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 9 ಸ್ತಬ್ದಚಿತ್ರಗಳು ಸೇರಿದಂತೆ ಒಟ್ಟು 39 ಸ್ತಬ್ದ ಚಿತ್ರಗಳು ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾಗಲಿವೆ.

ನಾಡಿನ ವಿವಿಧ ಜಿಲ್ಲೆಗಳಿಂದ ಆಗಮಿಸುವ ಜನಪದ ಕಲಾವಿದರಿಂದ ಮೆರವಣಿಗೆಗೆ ಮತ್ತಷ್ಟು ರಂಗುಸಿಗಲಿದೆ.ಮೆರವಣಿಗೆ ಸಾಗುವ ಮಾರ್ಗದ ಉದ್ದಕ್ಕೂ ಪೊಲೀಸರುಹದ್ದಿನ ಕಣ್ಣಿಟ್ಟಿದ್ದಾರೆ.

ಜಂಬೂ ಸವಾರಿ ಮೆರವಣಿಗೆ ಅಂತ್ಯಗೊಂಡ ನಂತರ ರಾತ್ರಿ 7 ಗಂಟೆಗೆ ಬನ್ನಿಮಂಟಪದ ಮೈದಾನದಲ್ಲಿ ದಸರಾ ಪಂಜಿನ ಕವಾಯತು ನಡೆಯಲಿದ್ದುರಾಜ್ಯಪಾಲ ವಜುಭಾಯಿ ವಾಲಾಗೌರವ ವಂದನೆ ಸ್ವೀಕಾರ ಮಾಡಲಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಕೇಂದ್ರದ ಹಾಗೂ ರಾಜ್ಯ ಸರ್ಕಾರದ ಹಲವು ಸಚಿವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಯದುವೀರ್ ಒಡೆಯರ್ ವಿಜಯಯಾತ್ರೆಯ

ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ವಿಜಯಯಾತ್ರೆಯ ವಿಧಿವಿಧಾನಗಳು ನಡೆಯಲಿದ್ದುಅರಮನೆಯ ಕರಿಕಲ್ಲು ತೊಟ್ಟಿಯಲ್ಲಿವಜ್ರಮುಷ್ಟಿ ಕಾಳಗ ನಡೆಯಲಿದೆ.

ಅರಮನೆಯ ಉತ್ತರ ದಿಕ್ಕಿನಲ್ಲಿರುವ ಭುವನೇಶ್ವರಿ ಅಮ್ಮನವರ ದೇಗುಲದ ಆವರಣಕ್ಕೆ ಹಾಗೂ ಅರಮನೆಗೆಯದುವೀರ್ ಒಡೆಯರ್ ವಿಜಯಯಾತ್ರೆ ಹೊರಡಲಿದ್ದಾರೆ.

ಬಳಿಕ ಬನ್ನಿ ಮರಕ್ಕೆ ಸಂಪ್ರದಾಯಬದ್ದವಾಗಿ ವಿಶೇಷ ಪೂಜೆ ಸಲ್ಲಿಸಿ ಬನ್ನಿ ಮಹಾಕಾಳಿಯಮ್ಮನವರ ಆಶೀರ್ವಾದ ಪಡೆದುಕೊಳ್ಳಲಿದ್ದಾರೆ.ಈ ಮೂಲಕ ರಾಜಮನೆತನದ ವಿಜಯದಶಮಿ ಪೂಜೆ ಕೈಂಕರ್ಯಗಳಿಗೆ ಅಂತಿಮ ತೆರೆ ಬೀಳಲಿದೆ.

‌‌ಅರಮನೆಯೊಳಗೆ 26 ಸಾವಿರ ಮಂದಿಗೆ ಆಸನ ವ್ಯವಸ್ಥೆ ಹಾಗೂ ಅಂಬಾರಿ ಸಾಗುವ ಎರಡೂ ಬದಿಯಲ್ಲಿ ಶಾಮಿಯಾನದ ವ್ಯವಸ್ಥೆ ಮಾಡಲಾಗಿದೆ. ರಾತ್ರಿ 7 ಗಂಟೆಗೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತಿನೊಂದಿಗೆ 10 ದಿನಗಳ ಉತ್ಸವಕ್ಕೆ ತೆರೆ ಬೀಳಲಿದೆ.

-ಸತತ ಎಂಟನೇ ಬಾರಿ ಅಂಬಾರಿ ಹೊರಲಿರುವ ಅರ್ಜುನ

-ಸೋಮವಾರ ಅರಮನೆಯಲ್ಲಿ ಆಯುಧಪೂಜೆ

-ಪಂಜಿನ ಕವಾಯತಿನೊಂದಿಗೆ ನಾಡಹಬ್ಬಕ್ಕೆ ಮಂಗಳವಾರ ತೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT