ಬುಧವಾರ, ನವೆಂಬರ್ 20, 2019
22 °C

ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ: ಮೂವರು ಸಾವು

Published:
Updated:
Prajavani

ಮೈಸೂರು: ಮೈಸೂರು - ತಿ.ನರಸೀಪುರ ರಸ್ತೆಯ ದುದ್ದಗೆರೆ ಗ್ರಾಮದ ಬಳಿ ಶುಕ್ರವಾರ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ.

ತಿ.ನರಸೀಪುರದಿಂದ ಮೈಸೂರು ಕಡೆಗೆ ಬರುತ್ತಿದ್ದ ಕಾರು ಬಸ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ ಮೋಹನ, ಉಮಾ ಸೇರಿ ಮೂವರು ಮೃತಪಟ್ಟಿದ್ದಾರೆ. ಮತ್ತೊಬ್ಬರ ಹೆಸರು ತಿಳಿದುಬಂದಿಲ್ಲ.

ತಿರುವಿನಲ್ಲಿ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಕಾರು ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)