ಶನಿವಾರ, ಫೆಬ್ರವರಿ 29, 2020
19 °C

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಂಗೀತ ವಿದ್ವಾಂಸ ಡಾ.ರಾ.ಸತ್ಯನಾರಾಯಣ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಂಗೀತ ವಿದ್ವಾಂಸ ಡಾ.ರಾ.ಸತ್ಯನಾರಾಯಣ (93) ಅವರು ಗುರುವಾರ ರಾತ್ರಿ ಇಲ್ಲಿನ ಜಯನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರಿಗೆ ಪುತ್ರ ರಾ.ಸ.ನಂದಕುಮಾರ್ ಹಾಗೂ ಪುತ್ರಿ ರೋಹಿಣಿ ಸುಬ್ಬರತ್ನಂ ಇದ್ದಾರೆ.

ನಿವಾಸದಲ್ಲಿ ಶುಕ್ರವಾರ ಮಧ್ಯಾಹ್ನ 1.30ರವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ಕ್ಕೆ  ಅಂತ್ಯಸಂಸ್ಕಾರವು ಮೈಸೂರು– ಬೆಂಗಳೂರು ರಸ್ತೆಯ ಕೆಂಗಲ್ ಗ್ರಾಮದ ಬಳಿಯ ‘ರಸ ಋಷಿ’ ಆಶ್ರಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇವರು ತಮ್ಮ ಅಂತಿಮ ಕ್ಷಣದವರೆಗೂ ‘ಸಂಗೀತ ಸುಧಾಕರ’ ಎಂಬ ಪುಸ್ತಕ ರಚನೆಯಲ್ಲಿ ತೊಡಗಿದ್ದರು. ‘ಇನ್ನು ನನ್ನ ಕೈಯಲ್ಲಿ ಆಗುವುದಿಲ್ಲ. ಈ ಕೆಲಸವನ್ನು ಮುಂದುವರಿಸು ಎಂದು ನನಗೆ ಹೇಳಿದ್ದರು’ ಎಂದು ಪುತ್ರ ರಾ.ಸ.ನಂದಕುಮಾರ್ ‘‍ಪ್ರಜಾವಾಣಿ’ಗೆ ತಿಳಿಸಿದರು.

ಜಯಚಾಮರಾಜ ಒಡೆಯರ್ ಅವರ ಆಸ್ಥಾನದಲ್ಲಿ ಸಂಗೀತ ವಿದ್ವಾಂಸರಾಗಿದ್ದ ರಾಮಯ್ಯ ಅವರ ಪುತ್ರರಾದ ಇವರು ಸಂತ ತ್ಯಾಗರಾಜ ಸಂಗೀತ ಪರಂಪರೆಯನ್ನು ಮುಂದುವರಿಸಿದವರು. ಇವರಿಗೆ ಕಾಶಿ ವಿಶ್ವವಿದ್ಯಾಲಯದಿಂದ ಮಹೋಪಧ್ಯಾಯ, ರಾಜ್ಯ ಸಂಗೀತ ವಿದ್ವಾನ್, ಸಂಗೀತ ನಾಟಕ ಅಕಾಡೆಮಿ ರತ್ನ, ವೀಣೆ ರಾಜಾರಾವ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದವು.

ಇವರ ಶಿಷ್ಯರು ಜರ್ಮನಿ, ಇಟಲಿ ಸೇರಿದಂತೆ ಪ್ರಪಂಚದ ನಾನಾ ಭಾಗಗಳಲ್ಲಿ ಇದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು