ಜನಾರ್ದನ ರೆಡ್ಡಿಗೆ ಕುಣಿಕೆ ಬಿಗಿಗೊಳಿಸಲು ಚಂದ್ರಬಾಬು ನಾಯ್ಡು ಒತ್ತಡ

7

ಜನಾರ್ದನ ರೆಡ್ಡಿಗೆ ಕುಣಿಕೆ ಬಿಗಿಗೊಳಿಸಲು ಚಂದ್ರಬಾಬು ನಾಯ್ಡು ಒತ್ತಡ

Published:
Updated:

ಬೆಂಗಳೂರು: ₹ 20 ಕೋಟಿ ಡೀಲ್‌ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣವನ್ನು ಬಿಗಿಗೊಳಿಸುವಂತೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ರಾಜ್ಯದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ.

ಕುಮಾರಸ್ವಾಮಿ ಅವರ ಜತೆಗಿನ ಮಾತುಕತೆ ಸಂದರ್ಭದಲ್ಲಿ ನಾಯ್ಡು ಈ ವಿಷಯ ಪ್ರಸ್ತಾಪಿಸಿದರು ಎಂದು ಮೂಲಗಳು ತಿಳಿಸಿವೆ.

‘ಇಲ್ಲಿ ಜನಾರ್ದನ ರೆಡ್ಡಿಯನ್ನು ಬಿಗಿ ಮಾಡಿದರೆ ಆಂಧ್ರದಲ್ಲಿ ವೈಆರ್‌ಎಸ್‌ ಕಾಂಗ್ರೆಸ್‌ನ ಜಗನ್‌ಮೋಹನ್ ರೆಡ್ಡಿ ಕಟ್ಟಿ ಹಾಕಬಹುದು. ರೆಡ್ಡಿ ಮತ್ತು ಜಗನ್‌ ಒಳ ವ್ಯವಹಾರಗಳನ್ನೂ ಮಟ್ಟ ಹಾಕಬಹುದು’ ಎಂದು ಹೇಳಿದರೆಂದು ಮೂಲಗಳು ತಿಳಿಸಿವೆ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಕುಮಾರಸ್ವಾಮಿ, ‘ರೆಡ್ಡಿ ವಿರುದ್ಧ ರಾಜಕೀಯ ದ್ವೇಷ ತೀರಿಸಿಕೊಳ್ಳುತ್ತಿಲ್ಲ. ವಂಚನೆ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಲಾಗಿದ್ದು, ಪೊಲೀಸರಿಗೆ ತನಿಖೆಯ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇನೆ. ತನಿಖೆಯ ಯಾವ ಹಂತದಲ್ಲೂ ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !