ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಳಿನ್‌ ಕುಮಾರ್‌ ಕಟೀಲ್ ಬಿಜೆಪಿ ಅಧ್ಯಕ್ಷ

Last Updated 20 ಆಗಸ್ಟ್ 2019, 17:59 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಂಗಳೂರು ಸಂಸದ ನಳಿನ್‌ ಕುಮಾರ್ ಕಟೀಲ್‌ ಅವರನ್ನು ನೇಮಕ ಮಾಡಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿರ್ದೇಶನದ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿನ್ನೆಲೆಯ ನಳಿನ್‌, 2009ರಲ್ಲಿ ಮೊದಲ ಬಾರಿಗೆ ಮಂಗಳೂರು ಸಂಸದರಾಗಿ ಆಯ್ಕೆಯಾದರು. 2014 ಹಾಗೂ 2019ರಲ್ಲಿಯೂ ಸಂಸದರಾಗಿ ಪುನರಾಯ್ಕೆ ಆದರು. ಕಟ್ಟಾ ಆರ್‌ಎಸ್‌ಎಸ್‌ ಸಿದ್ಧಾಂತದ ಪ್ರತಿಪಾದಕ ನಳಿನ್‌ ಅವರ ಹೆಸರು ಅಧ್ಯಕ್ಷ ಸ್ಥಾನಕ್ಕೆ ಮೂರು ವರ್ಷದ ಹಿಂದೆಯೂ ಒಮ್ಮೆ ಮುಂಚೂಣಿಗೆ ಬಂದಿತ್ತು.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಜತೆ ಹೊಂದಿಕೊಂಡು ಕೆಲಸ ಮಾಡಬಲ್ಲ ವ್ಯಕ್ತಿಯನ್ನೇ ಅಧ್ಯಕ್ಷ ಹುದ್ದೆಗೆ ನೇಮಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಈ ಹುದ್ದೆಗೆ ಸಿ.ಟಿ.ರವಿ, ಅರವಿಂದ ಲಿಂಬಾವಳಿ ಹೆಸರು ಕೇಳಿ ಬಂದಿತ್ತು. ಅಂತಿಮವಾಗಿ ವರಿಷ್ಠರು ಸಂಘಟನಾ ಸಾಮರ್ಥ್ಯ ಹೊಂದಿರುವ, ರಾಜ್ಯದ ಪ್ರಮುಖ ಬಂಟ ಸಮುದಾಯದ ನಳಿನ್‌ ಅವರಿಗೆ ಪಕ್ಷದ ಚುಕ್ಕಾಣಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT