ಗುರುವಾರ , ಜುಲೈ 16, 2020
23 °C
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

ಹೂವಿನಲ್ಲಿ ಚಿನ್ನ ತೆಗೆಯಲು ಹೊರಟ ಸಿದ್ದರಾಮಯ್ಯ: ನಳಿನ್‌ಕುಮಾರ್‌ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆಯುವ ಹೇಳಿಕೆ ನೀಡಿದಂತೆ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್‌ ಟೀಕಿಸಿದ್ದಾರೆ.

‘ಒಬ್ಬ ರೈತ ಎಲ್ಲಿ ಎಕರೆಗೆ ₹ 50 ಲಕ್ಷ ಖರ್ಚು ಮಾಡಿದ್ದಾನೆ ಎಂಬ ಬಗ್ಗೆ ಸಿದ್ದರಾಮಯ್ಯ ಅಧ್ಯಯನ ಮಾಡಬೇಕು. ಎಲ್ಲವನ್ನೂ ತಿಳಿದು ಮಾತನಾಡಲಿ. ಈಗಿನ ಸ್ಥಿತಿಯಲ್ಲಿ ಕಾಂಗ್ರೆಸ್ ರಾಜಕಾರಣ ಬಿಟ್ಟು, ಜನರ ಕಣ್ಣೀರು ಒರೆಸುವ ಕೆಲಸಕ್ಕೆ ಮುಂದಾಗಬೇಕು‘ ಎಂದಿದ್ದಾರೆ.

‘ಮುಖ್ಯಮಂತ್ರಿ, ಹಣಕಾಸು ಸಚಿವರಾಗಿ ಕೆಲಸ ಮಾಡಿರುವ ಅವರಿಗೆ ಹೂವು ಬೆಳೆಯಲು ರೈತ ಎಷ್ಟು ಖರ್ಚು ಮಾಡುತ್ತಾನೆ ಎಂಬ ಸಾಮಾನ್ಯ ಜ್ಞಾನವೂ ಇಲ್ಲ‘ ಎಂದು ಅವರು  ಪತ್ರಿಕಾ ಹೇಳಿಕೆಯಲ್ಲಿ ಟೀಕಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು