ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ ಜೈಲಿನಲ್ಲಿ ಯಾವ ದೇಶದ ಇತಿಹಾಸ ಓದಿದ್ದಾರೆ:ನಳಿನ್ ಕುಮಾರ್ ಕಟೀಲ್ ಪ್ರಶ್ನೆ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನೆ
Last Updated 26 ಫೆಬ್ರುವರಿ 2020, 2:14 IST
ಅಕ್ಷರ ಗಾತ್ರ

ಬೆಂಗಳೂರು: ‘ದೇಶ ವಿರೋಧಿ ಘೋಷಣೆ ಕೂಗಿದ ಅಮೂಲ್ಯಾ ಲಿಯೋನ್‌ ಪರ ಮಾತನಾಡುತ್ತಿರುವ ಶಾಸಕ ಡಿ.ಕೆ.ಶಿವಕುಮಾರ್, ತಿಹಾರ್ ಜೈಲಿನಲ್ಲಿ ಭಾರತದ ಇತಿಹಾಸ ಓದಿದ್ದಾರೋ ಅಥವಾ ಪಾಕಿಸ್ತಾನದ ಇತಿಹಾಸ ಓದಿದ್ದಾರೋ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದರು.

ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎನ್‌.ಆರ್.ರಮೇಶ್ ಮಂಗಳವಾರ ಅಧಿಕಾರ ಸ್ವೀಕರಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕಾಂಗ್ರೆಸ್‌ನವರು ಹಿಂದೆಕರೆಂಟ್ ಕಂಬ ನಿಲ್ಲಿಸಿ ಗೆಲ್ಲಿಸಿಕೊಂಡು ಅಧಿಕಾರ ಹಿಡಿಯುತ್ತಿದ್ದರು. ಆದರೆ, ಈಗ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳುವ ಯೋಗ್ಯತೆಯೂ ಇಲ್ಲವಾಗಿದೆ. ಒಂದು ಕಾಲದಲ್ಲಿ ತಿಹಾರ್ ಜೈಲಿನಲ್ಲಿಅಫ್ಜಲ್ ಗುರು, ಛೋಟಾ ಶಕೀಲ್,ಕಸಬ್‌ ಸೇರಿದಂತೆ ಹಲವರ ಹೆಸರು ಕೂಗಲಾಗುತಿತ್ತು. ಆದರೆ, ಈಗ ಪಿ.ಚಿದಂಬರಂ, ಎ.ರಾಜಾ, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರ ಹೆಸರು ಕರೆಯುವ ಪರಿಸ್ಥಿತಿ ಬಂದಿತ್ತು’ ಎಂದು ಟೀಕಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ಗೆ ನಾಯಕತ್ವ ಇಲ್ಲದೆ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಆರು ತಿಂಗಳಾದರೂ ಹೊಸ ಅಧ್ಯಕ್ಷರನ್ನು ನೇಮಕ ಮಾಡಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದರು.

ಮೂರು ರೀತಿ ಸಿ.ಎಂ:‘ಸಿದ್ದರಾಮಯ್ಯ ಅವರು ಜಾತಿ, ಧರ್ಮದ ನಡುವೆ ದ್ವೇಷ ಸೃಷ್ಟಿಸಿ, ರಾಜಕೀಯ ಮಾಡಿದರು. ಅವರ ಆಡಳಿತದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಗಳು ನಡೆದವು. ರೈತರು ಆತ್ಮಹತ್ಯೆ ಮಾಡಿಕೊಂಡರು. ಹಲವು ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆಯಬೇಕಾಯಿತು. ಎಚ್‌.ಡಿ.ಕುಮಾರಸ್ವಾಮಿ ಎಲ್ಲೆಡೆ ಕಣ್ಣೀರು ಹಾಕಿದರು. ಈಗ ಬಿ.ಎಸ್.ಯಡಿಯೂರಪ್ಪ ಅವರು ಸಂಕಷ್ಟದಲ್ಲಿರುವವರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT