ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ

Last Updated 16 ಜನವರಿ 2020, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಂದಿನಿ ಹಾಲಿನ ದರ ಲೀಟರ್‌ಗೆ ₹2ರಿಂದ ₹3 ಹೆಚ್ಚಳವಾಗುವ ಸಾಧ್ಯತೆ ಇದ್ದು, ಈ ಸಂಬಂಧ ಮೂರು ದಿನಗಳಲ್ಲಿ ಕರ್ನಾಟಕ ಹಾಲು ಮಹಾಮಂಡಳಿ ನಿರ್ಧಾರ ಕೈಗೊಳ್ಳಲಿದೆ.

‘ದರ ಹೆಚ್ಚಳ ಮಾಡಬೇಕು ಎಂಬ ಪ್ರಸ್ತಾವನೆಯನ್ನು ಎಲ್ಲಾ 14 ಒಕ್ಕೂಟಗಳು ಸಲ್ಲಿಸಿವೆ. ಶುಕ್ರವಾರ ನಡೆಯಲಿರುವ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ಸಾಧಕ–ಬಾಧಕ ಪರಿಶೀಲಿಸಲಾಗುವುದು. ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜತೆಗೂ ಚರ್ಚೆ ನಡೆಸಿ ಇನ್ನು ಮೂರು ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

‘ಮೂರು ವರ್ಷಗಳಿಂದ ಹಾಲಿನ ದರ ಹೆಚ್ಚಳವಾಗಿಲ್ಲ. ಖಾಸಗಿ ಸಂಸ್ಥೆಗಳಿಗಿಂತ ಕೆಎಂಎಫ್‌ ಹಾಲು ಲೀಟರ್‌ಗೆ ₹8ರಿಂದ ₹10 ಕಡಿಮೆಗೆ ಸಿಗುತ್ತಿದೆ. ಎಷ್ಟೇ ದರ ಹೆಚ್ಚಳವಾದರೂ ಅದನ್ನು ಹಾಲು ಉತ್ಪಾದಕ ರೈತರಿಗೆ ನೀಡಲಾಗುವುದು. ಇದಲ್ಲದೇ, ಸರ್ಕಾರ ಸದ್ಯ ಹಾಲು ಉತ್ಪಾದಕರಿಗೆ ಲೀಟರ್‌ಗೆ ನೀಡುತ್ತಿರುವ ₹5 ಪ್ರೋತ್ಸಾಹದನವನ್ನು ₹6ಕ್ಕೆ ಹೆಚ್ಚಿಸಬೇಕು ಎಂಬ ಮನವಿಯನ್ನೂ ಮುಖ್ಯಮಂತ್ರಿ ಅವರಿಗೆ ಮಾಡಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT