ಕಬಿನಿಯಿಂದ 75 ಸಾವಿರ ಕ್ಯುಸೆಕ್ ನೀರು ಬಿಡುಗಡೆ: ನಂಜನಗೂಡು ಮುಳುಗಡೆ

7

ಕಬಿನಿಯಿಂದ 75 ಸಾವಿರ ಕ್ಯುಸೆಕ್ ನೀರು ಬಿಡುಗಡೆ: ನಂಜನಗೂಡು ಮುಳುಗಡೆ

Published:
Updated:

ಮೈಸೂರು: ಕಬಿನಿ ಜಲಾಶಯದಿಂದ 75 ಸಾವಿರ ಕ್ಯುಸೆಕ್ ನೀರು ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡು ನೀರಿನಿಂದ ಆವೃತ್ತವಾಗಿದೆ.

ಇಲ್ಲಿನ ಶ್ರೀಕಂಠೇಶ್ವರ ದೇವಸ್ಥಾನ ಎದುರಿನ ರಸ್ತೆ, ದೇವಸ್ಥಾನದ ಸ್ನಾನಘಟ್ಟ, ಮುಡಿಕಟ್ಟೆ, ಪರಶುರಾಮ ದೇವಸ್ಥಾನ, ಅಯ್ಯಪ್ಪಸ್ವಾಮಿ ದೇವಸ್ಥಾನ, ಸತ್ಯನಾರಾಯಣ ಸ್ವಾಮಿ ದೇಗುಲ, ಹದಿನಾರುಕಾಲು ಮಂಟಪ, ಹೆಜ್ಜಿಗೆ ಸಂಪರ್ಕಿಸುವ ಸೇತುವೆ ಬಹುತೇಕ ನೀರಿನಿಂದ ತುಂಬಿವೆ.

ಪಟ್ಟಣದ ಹಳ್ಳದಕೇರಿ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

ಈ ಹಿನ್ನೆಲೆಯಲ್ಲಿ ಕಂದಾಯ ಮತ್ತು ಕೌಶಲಾಭಿವೃದ್ಧಿ ಸಚಿವ ಆರ್‌.ವಿ.ದೇಶಪಾಂಡೆ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿ ಪರಿಹಾರ ನೀಡುವ ಭರವಸೆ ನೀಡಿದರು.

ನೆರೆಪೀಡಿತ ಪ್ರದೇಶಗಳನ್ನು ಡ್ರೋಣ್ ಕ್ಯಾಮೆರಾ ಬಳಸಿ ಚಿತ್ರೀಕರಿಸಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 2

  Sad
 • 1

  Frustrated
 • 3

  Angry

Comments:

0 comments

Write the first review for this !