ಸಿಗದ ಅನುದಾನ: ಕಾಂಗ್ರೆಸ್‌ ಶಾಸಕರ ಅಸಮಾಧಾನ

7

ಸಿಗದ ಅನುದಾನ: ಕಾಂಗ್ರೆಸ್‌ ಶಾಸಕರ ಅಸಮಾಧಾನ

Published:
Updated:

ಬೆಳಗಾವಿ: ಅನುದಾನದ ವಿಚಾರದಲ್ಲಿ ಕಾಂಗ್ರೆಸ್‌ ಶಾಸಕರು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

ಇಲ್ಲಿನ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಬಂಗಾರಪೇಟೆ ಕಾಂಗ್ರೆಸ್‌ ಶಾಸಕ ನಾರಾಯಣಸ್ವಾಮಿ, ‘ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಸರಿಯಾಗಿ ಅನುದಾನ ಸಿಗುತ್ತಿಲ್ಲ’ ಎಂದರು.

‘ಈ ವಿಷಯವನ್ನು ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಪರಮೇಶ್ವರ ಅವರ ಗಮನಕ್ಕೆ ತಂದಿದ್ದೇವೆ. ಆದರೆ ಯಾವುದೇ ಯೋಜನವಾಗಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕಷ್ಟವಾಗಲಿದೆ’ ಎಂದರು.

‘ಕೋಲಾರ ಜಿಲ್ಲೆಯಿಂದ ನಾವು ಐವರು ಶಾಸಕರಿದ್ದೇವೆ. ಜಿಲ್ಲೆಗೆ ಸಚಿವ ಸ್ಥಾನವನ್ನೇ ಕೊಟ್ಟಿಲ್ಲ. ನಾನು ಹಿರಿಯನಿದ್ದೇನೆ. ಸಚಿವ ಸ್ಥಾನ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !