ಬೆಂಗಳೂರು: ರಾಜ್ಯದಲ್ಲಿ ನರೇಗಾ ಕೂಲಿ ಕಾರ್ಮಿಕರ ವೇತನವನ್ನು ₹275ವರೆಗೆ ಹೆಚ್ಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿರುವ ಅವರು, ನರೇಗಾ ಯೋಜನೆಗೆ ಕೇಂದ್ರದಿಂದ 1,861 ಕೋಟಿ ರೂ ಹಣ ಬಿಡುಗಡೆ ಆಗಿದೆ. ಇದರಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ 1,039 ಕೋಟಿ ರೂ ಬಾಕಿ ಹಣ ಕೊಡಬೇಕಿದೆ. ರಾಜ್ಯ ಸರ್ಕಾರದಿಂದಲೂ ₹257 ಕೋಟಿ ಅನುದಾನ ಬಿಡುಗಡೆಯಾಗಿದೆ,’ ಎಂದು ತಿಳಿಸಿದರು.

ಕೊರೋನಾ ವೈರಸ್‌ನಿಂದಾದ ಪರಿಣಾಮಗಳಿಂದಾಗಿ ನರೇಗಾ ಕೂಲಿ ಹಣದಲ್ಲಿ ಹೆಚ್ಚಳ ಆಗಿದೆ. ರಾಜ್ಯದಲ್ಲಿ ನರೇಗಾ ಕೂಲಿ ಕಾರ್ಮಿಕರ ವೇತನವನ್ನು ₹275ವರೆಗೆ ಹೆಚ್ಚಿಸಲಾಗಿದೆ. ಕೊರೋನಾದಿಂದ ಸಂಕಷ್ಟಕ್ಕೊಳಗಾಗಿರುವ ಕೂಲಿ ಕಾರ್ಮಿಕರಿಗೆ ಇದು ನೆರವಾಗಲಿದೆ. ಇನ್ನುಮುಂದೆ ನರೇಗಾ ಕಾಮಗಾರಿಗಳು ಚುರುಕಾಗಲಿವೆ ಎಂದು ಈಶ್ವರಪ್ಪ ತಿಳಿಸಿದರು.

ಹಿಂದೆ ಕೆಲವರಿಗೆ ಕೂಲಿ ಮತ್ತು ಸಲಕರಣೆಗಳ ಬಿಲ್ ಬಾಕಿ ಇತ್ತು. ಎಲ್ಲವನ್ನೂ ಪಾವತಿಸಿದ ಬಳಿಕ 1077 ಬಾಕಿ ಹಣ ಉಳಿಯಲಿದೆ. ಮುಂದಿನ ದಿನಗಳಲ್ಲಿ ಉಳಿಕೆ ನರೇಗಾ ಹಣದ ಬಳಕೆ ಮಾಡಿಕೊಳ್ಳುತ್ತೇವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.