ಗಣ್ಯರ ಆಗಮನದ ಹಿನ್ನೆಲೆ ನ್ಯಾಷನಲ್ ಕಾಲೇಜು ಮೈದಾನ ಪರಿಶೀಲಿಸಿದ ಉಪಮುಖ್ಯಮಂತ್ರಿ 

7

ಗಣ್ಯರ ಆಗಮನದ ಹಿನ್ನೆಲೆ ನ್ಯಾಷನಲ್ ಕಾಲೇಜು ಮೈದಾನ ಪರಿಶೀಲಿಸಿದ ಉಪಮುಖ್ಯಮಂತ್ರಿ 

Published:
Updated:

ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ಅವರ‌ ಪಾರ್ಥೀವ ಶರೀರದ ಅಂತಿಮ‌ ದರ್ಶನಕ್ಕೆ ಮಂಗಳವಾರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಇದರ ಪೂರ್ವ ಸಿದ್ಧತೆಯನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಪರಿಶೀಲನೆ‌ ನಡೆಸಿದರು. 

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅನಂತ ಕುಮಾರ್ ಅವರ ದರ್ಶನಕ್ಕೆ ಸಾರ್ವಜನಿಕರು ಹಾಗೂ ಗಣ್ಯರಿಗೆ ಅವಕಾಶ ಮಾಡಿಕೊಡಲು ಬಿಬಿಎಂಪಿ‌ ಹಾಗೂ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ ಕೇಂದ್ರದ ಗೃಹ ಸಚಿವರು, ಉಪರಾಷ್ಟ್ರಪತಿ ಸೇರಿದಂತೆ ಕೇಂದ್ರದ ಅನೇಕ ಸಚಿವರುಗಳು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಅವರಿಗೆ ಸೂಕ್ತ ಭದ್ರತೆ ಹಿನ್ನೆಲೆಯಲ್ಲಿ ಮೈದಾನವನ್ನು ಪರಿಶೀಲಿಸಲಾಗಿದೆ. ಮಂಗಳವಾರ ಎರಡೂವರೆ ಗಂಟೆಗಳ ಕಾಲ ದರ್ಶನಕ್ಕೆ ಅವಕಾಶವಿರಲಿದೆ ಎಂದರು. 

ಇಂದು ಸಂಜೆ 8.30 ಕ್ಕೆ ಪ್ರಧಾನಿ ನರೇಂದ್ರ ಮೋದಿ ಅನಂತ ಕುಮಾರ್‌ ಅವರಿಗೆ ಅಂತಿಮ ನಮನ ಸಲ್ಲಿಸಲು ಬರುವ ಮಾಹಿತಿ ಸಿಕ್ಕಿದೆ ಎಂದರು.

ಬಿಜೆಪಿ ನಾಯಕ, ಕೇಂದ್ರ ಸಚಿವ ಅನಂತ್‌ಕುಮಾರ್ ಇನ್ನಿಲ್ಲ

* ಅಕಾಲಿಕ ನಿಧನದ ಶೂನ್ಯ ತುಂಬುವುದು ಸುಲಭದ ಮಾತಲ್ಲ

ವಿಶಿಷ್ಟ ಆಲೋಚನೆಗಳ ಸಂಘಟನಾ ಚತುರ

ನಾಳೆ ಮಧ್ಯಾಹ್ನ 1ಕ್ಕೆ ಚಾಮರಾಜಪೇಟೆಯಲ್ಲಿ ಅಂತ್ಯಸಂಸ್ಕಾರ

ಸರ್ಕಾರಿ ಕಚೇರಿ, ಬ್ಯಾಂಕ್‌, ಶಿಕ್ಷಣ ಸಂಸ್ಥೆಗಳಿಗೆ ರಜೆ

*  ಅನಂತಕುಮಾರ್‌ ಕೇಂದ್ರ, ರಾಜ್ಯ ಸರ್ಕಾರಕ್ಕೆ ಕೊಂಡಿಯಂತೆ ಇದ್ದರು: ಯಡಿಯೂರಪ್ಪ

‘ಬಿಜೆಪಿಯ ಬಹುದೊಡ್ಡ ಆಸ್ತಿ’: ಅನಂತಕುಮಾರ್ ಸೇವೆ ನೆನಪಿಸಿಕೊಂಡ ರಾಷ್ಟ್ರ ನಾಯಕರು

* ಒಳ್ಳೆಯವರಿಗೆ ದೇವರು ಅನ್ಯಾಯ ಮಾಡಿಬಿಟ್ಟ; ಸಂಸದ ಪ್ರಹ್ಲಾದ ಜೋಶಿ

* ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಂತಾಪ

ಅನಂತ್ ಇಲ್ಲದ ಬಿಜೆಪಿಯನ್ನು ಊಹಿಸಲಿಕ್ಕೂ ಸಾಧ್ಯವಿಲ್ಲ: ಸುರೇಶ್‌ಕುಮಾರ್

* ರಾಜಕೀಯ ಕಾರ್ಯಭಾರದಲ್ಲಿ ರೋಗಲಕ್ಷಣ ನಿರ್ಲಕ್ಷಿಸಿದ್ದರೆ ಅನಂತಕುಮಾರ್?

‘ಶೋಕಾಚರಣೆಯ ದಿನವಾಗದೆ ಕ್ಯಾನ್ಸರ್‌ಗೆ ತುತ್ತಾಗುವವರ ಭವಿಷ್ಯದ ಬಗ್ಗೆ ಚಿಂತಿಸಿ’

ಅನಂತಕುಮಾರ್‌ ನೆನೆದು ಕಣ್ಣೀರಿಟ್ಟ ಸಂಸದ ಪ್ರತಾಪ್‌ ಸಿಂಹ

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !