ರಾಷ್ಟ್ರೀಯ ತಾಂತ್ರಿಕ ಉತ್ಸವ

7

ರಾಷ್ಟ್ರೀಯ ತಾಂತ್ರಿಕ ಉತ್ಸವ

Published:
Updated:
Deccan Herald

ಬಸವನಗುಡಿಯಲ್ಲಿ ಇರುವ ಬಿಎಂಎಸ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ತಾಂತ್ರಿಕ ಉತ್ಸವ (ಫೇಸ್‌ ಶಿಫ್ಟ್‌–2018) ಮತ್ತು ವಿಚಾರ ಸಂಕಿರಣಕ್ಕೆ ಶನಿವಾರ ಚಾಲನೆ ದೊರೆಯಲಿದೆ.

ಬಿಎಂಎಸ್‌ಸಿಇ ಕಾಲೇಜಿನ ವಿವಿಧ ವಿಭಾಗಗಳ ವಿದ್ಯಾರ್ಥಿಗಳಷ್ಟೇ ಅಲ್ಲದೆ ಬೆಂಗಳೂರಿನ ಬಹುತೇಕ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ದೇಶದ ವಿವಿಧ ಭಾಗಗಳ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಸಂಶೋಧನೆ ಮತ್ತು ಆವಿಷ್ಕಾರಗಳ ಮಾದರಿಗಳನ್ನು ಈ ಉತ್ಸವದಲ್ಲಿ ಪ್ರದರ್ಶಿಸಲಿದ್ದಾರೆ. ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಂಡು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲಿದ್ದಾರೆ.

ಉತ್ಸವದಲ್ಲಿ 150ಕ್ಕೂ ಹೆಚ್ಚು ಉದ್ಯಮಗಳ ಪ್ರತಿನಿಧಿಗಳು ಭಾಗವಹಿಸಲಿದ್ದು, ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಲಿದ್ದಾರೆ.ಇಸ್ರೊ, ಎನ್‌ಎಎಲ್‌, ಆಲ್ಫಾ ಡಿಸೈನ್‌ ಟೆಕ್ನಾಲಜಿಯ ಪ್ರತಿನಿಧಿಗಳು ವಿಚಾರ ಸಂಕಿರಣದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಲಿದ್ದಾರೆ.

ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಗೆ ಉತ್ಸವಲ ಉದ್ಘಾಟನೆಗೊಳ್ಳಲಿದೆ. ಇಸ್ರೊ ಮಾಜಿ ನಿರ್ದೇಶಕ ಡಾ. ಎಸ್‌.ಕೆ.ಶಿವಕುಮಾರ್‌, ಬಿಎಂಎಸ್‌ಸಿಇ ಟ್ರಸ್ಟಿ ಡಾ. ಪಿ. ದಯಾನಂದ ಪೈ, ಬಿಎಂಎಸ್‌ಇಟಿ ಟ್ರಸ್ಟಿ ಎಂ. ಮದನ್‌ ಗೋಪಾಲ್‌ ಅತಿಥಿಗಳಾಗಿ ಭಾಗವಹಿಸುವರು. ಬಿಎಂಎಸ್‌ಇಟಿ ಅಧ್ಯಕ್ಷರಾದ ಡಾ. ಬಿ.ಎಸ್‌.ರಾಗಿಣಿ ನಾರಾಯಣ್ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. 

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !