ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋರ್ಟ್‌ಗೆ ಶಂಕಿತ ನಕ್ಸಲ್‌ ಮುಖಂಡ ರೂಪೇಶ್‌ ಹಾಜರು

31ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಧೀಶರು
Last Updated 20 ಆಗಸ್ಟ್ 2019, 13:10 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗಿನಲ್ಲಿ ನಕ್ಸಲ್ ಚಟುವಟಿಕೆ ನಡೆಸಿದ್ದ ಆರೋಪದ ಮೇರೆಗೆ ಬಂಧಿತನಾಗಿರುವ ಶಂಕಿತ ನಕ್ಸಲ್‌ ಮುಖಂಡ ರೂಪೇಶ್‌ನನ್ನು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಮಂಗಳವಾರ ಹಾಜರು ಪಡಿಸಲಾಯಿತು.

ಮಡಿಕೇರಿ ಕೋರ್ಟ್‌ ಆವರಣಕ್ಕೆ ಹಾಜರಾಗುತ್ತಿದ್ದಂತೆಯೇ ರೂಪೇಶ್, ‘ಪಶ್ಚಿಮಘಟ್ಟದಲ್ಲಿ ಕಾಡು ಉಳಿಸಿ...’ ಎಂದು ಘೋಷಣೆ ಕೂಗಿದ ಪ್ರಸಂಗವೂ ನಡೆಯಿತು.

ಮಂಗಳವಾರ ಬೆಳಿಗ್ಗೆ ಕೇರಳ ಜೈಲಿನಲ್ಲಿದ್ದ ರೂಪೇಶ್‌ನನ್ನು ಪೊಲೀಸ್ ಭದ್ರತೆಯೊಂದಿಗೆ ಕೋರ್ಟ್ ಆವರಣಕ್ಕೆ ಕರೆ ತರಲಾಯಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ರೂಪೇಶ್ 9ನೇ ಬಾರಿಗೆ ವಿಚಾರಣೆಗೆ ಹಾಜರಾದ. ನ್ಯಾಯಾಧೀಶರು ಆಗಸ್ಟ್ 31ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿದರು. ನಂತರ, ಬಿಗಿ ಪೊಲೀಸ್ ಭದ್ರತೆಯ ಕೇರಳಕ್ಕೆ ವಾಪಾಸ್ ಕರೆದೊಯ್ಯಲಾಯಿತು.

ರೂಪೇಶ್ ವಿರುದ್ಧ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರ ಪ್ರದೇಶಗಳಲ್ಲಿ ನಕ್ಸಲ್‌ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದ ಆರೋಪಗಳಿವೆ. 2010ರಲ್ಲಿ ಭಾಗಮಂಡಲ ಸಮೀಪದ ಮುಂಡ್ರೋಟು ಮತ್ತು 2013ರಲ್ಲಿ ಕಾಲೂರು ಗ್ರಾಮದಲ್ಲಿ ಪ್ರತ್ಯಕ್ಷನಾಗಿದ್ದ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT