ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್: ರಾಜ್ಯದ ತಾತ್ಕಾಲಿಕ ಪಟ್ಟಿ ಬಿಡುಗಡೆ

ವೈದ್ಯಕೀಯ ಶಿಕ್ಷಣ: ಸೀಟ್‌ ಮ್ಯಾಟ್ರಿಕ್ಸ್‌ ವಿಳಂಬ
Last Updated 26 ಜೂನ್ 2019, 19:26 IST
ಅಕ್ಷರ ಗಾತ್ರ

ಬೆಂಗಳೂರು: ನೀಟ್‌ ಪರೀಕ್ಷೆಗೆ ಹಾಜರಾಗಿ ವೈದ್ಯಕೀಯ/ ದಂತ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಪಡೆಯಲು ಬಯಸಿರುವ ರಾಜ್ಯದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಆದರೆ ವೈದ್ಯಕೀಯ ಸೀಟ್‌ ಮ್ಯಾಟ್ರಿಕ್ಸ್‌ ಮಾತ್ರ ಇನ್ನೂ ಪ್ರಕಟವಾಗಿಲ್ಲ.

‘ವೃತ್ತಿಪರ ಕೋರ್ಸ್‌ ಆಯ್ಕೆ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಮೊದಲು ವೈದ್ಯಕೀಯ ಕಾಲೇಜು ಆಯ್ಕೆಯ ಅವಕಾಶ ನೀಡಬೇಕು ಎಂಬ ಚಿಂತನೆಯಲ್ಲಿ ಕೆಲವು ವರ್ಷಗಳಿಂದೀಚೆಗೆ ಪ್ರಯತ್ನ ನಡೆಯುತ್ತಿದೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಈ ವರ್ಷವೂ ವೈದ್ಯಕೀಯ ಸೀಟ್‌ ಮ್ಯಾಟ್ರಿಕ್ಸ್‌ ಸ್ವಲ್ಪ ವಿಳಂಬವಾಗಿದೆ. ಹಾಗಿದ್ದರೂ ಎಂಜಿನಿಯರಿಂಗ್‌ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಈ ಮೊದಲು ನಗದಿಪಡಿಸಿದ ದಿನಾಂಕದಂತೆಯೇ ನಡೆಯಲಿದೆ’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಈಗಾಗಲೇ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ನೀಟ್ ರ‍್ಯಾಂಕ್‌ ಪಟ್ಟಿಯನ್ನು ಕೇಂದ್ರಕ್ಕೆ ಸಲ್ಲಿಸಿದ್ದು, ಒಂದೆರಡು ದಿನಗಳಲ್ಲಿ ವೈದ್ಯಕೀಯ ಸೀಟ್‌ ಮ್ಯಾಟ್ರಿಕ್ಸ್ ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

ಇಂದು ಅಣಕು ಹಂಚಿಕೆ ಫಲಿತಾಂಶ: ಕೆಇಎ ವತಿಯಿಂದ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್‌, ಕೃಷಿ ವಿಜ್ಞಾನ (ಕೃಷಿ, ಪಶು) ಕೋರ್ಸ್‌ಗಳ ಪ್ರವೇಶಕ್ಕಾಗಿ ಗುರುವಾರ ಸಂಜೆ 6ರ ಬಳಿಕ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟವಾಗಲಿದೆ. ರಾತ್ರಿ 8 ಗಂಟೆಯಿಂದ 29ರ ಬೆಳಿಗ್ಗೆ 11ರವರೆಗೆ ಆಯ್ಕೆಗಳನ್ನು ಬದಲಾಯಿಸಲು ಅವಕಾಶ ಇದೆ. 30ರಂದು ಸಂಜೆ 6 ಗಂಟೆಯ ನಂತರ ನೈಜ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT