ನಾಲ್ಕು ಹೊಸ ಕೇಂದ್ರ ಕಾರಾಗೃಹ ಸ್ಥಾಪನೆ

7

ನಾಲ್ಕು ಹೊಸ ಕೇಂದ್ರ ಕಾರಾಗೃಹ ಸ್ಥಾಪನೆ

Published:
Updated:

ಬೆಂಗಳೂರು: ‘ಒಂದು ಸಾವಿರ ಕೈದಿಗಳ ಸಾಮರ್ಥ್ಯವುಳ್ಳ ನಾಲ್ಕು ಹೊಸ ಕೇಂದ್ರ ಕಾರಾಗೃಹಗಳನ್ನು ಬೆಂಗಳೂರು, ಮಂಗಳೂರು, ಹಾಸನ ಮತ್ತು ಬೀದರ್‌ಗಳಲ್ಲಿ ಸ್ಥಾಪಿಸಲಾಗುತ್ತಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್‌.ಜಿ.ಪಂಡಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ’ಈಗಾಗಲೇ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಕಾರಾಗೃಹ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಲಾಗಿದೆ. ಈ ಕುರಿತು ಪ್ರಮಾಣ ಪತ್ರ ಸಲ್ಲಿಸಲು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.

‘ಜೈಲುಗಳಲ್ಲಿ ಮಿತಿ ಮೀರಿ ಕೈದಿಗಳನ್ನು ಭರ್ತಿ ಮಾಡಿರುವುದು ಮಾನವ ಹಕ್ಕುಗಳ ಉಲ್ಲಂಘನೆ. ಆದ್ದರಿಂದ, ಮುಕ್ತ ಕಾರಾಗೃಹ ಆರಂಭಿಸಲು ಮತ್ತು ಖಾಲಿಯಿರುವ ಜೈಲು ಸಿಬ್ಬಂದಿಗಳ ಹುದ್ದೆ ಭರ್ತಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಿ’ ಎಂದು ಸುಪ್ರೀಂ ಕೋರ್ಟ್‌ ಎಲ್ಲ ಹೈಕೋರ್ಟ್‌ಗಳಿಗೆ ಸೂಚಿಸಿತ್ತು.

ಇದರ ಅನುಸಾರ ರಾಜ್ಯ ಹೈಕೋರ್ಟ್‌ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಅರ್ಜಿ ಇದಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !