‘ಹೊಸ ಆಸ್ಪತ್ರೆ‌ ಮಂಜೂರಾತಿ ಸದ್ಯಕ್ಕಿಲ್ಲ’

7

‘ಹೊಸ ಆಸ್ಪತ್ರೆ‌ ಮಂಜೂರಾತಿ ಸದ್ಯಕ್ಕಿಲ್ಲ’

Published:
Updated:

ನಿಡಗುಂದಿ (ವಿಜಯಪುರ ಜಿಲ್ಲೆ): ಹೊಸ ಆಸ್ಪತ್ರೆಗಳಿಗೆ ಸದ್ಯಕ್ಕೆ ಮಂಜೂರಾತಿ ನೀಡುವುದಿಲ್ಲ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು.

ಇಲ್ಲಿಗೆ ಸಮೀಪದ ಬೇನಾಳ ಎನ್‌.ಎಚ್‌ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಆದರೆ ಅವುಗಳಿಗೆ ಸೌಲಭ್ಯಗಳಿಲ್ಲ. ಹೀಗಾಗಿ ಹೊಸ ಆಸ್ಪತ್ರೆಗೆ ಅನುಮತಿ ನೀಡುವ ಬದಲು, ಇರುವ ಆರೋಗ್ಯ ಕೇಂದ್ರಗಳಿಗೇ ಸಕಲ ಸೌಲಭ್ಯ ಒದಗಿಸಲು ಮೊದಲ ಆದ್ಯತೆ ನೀಡುತ್ತೇನೆ’ ಎಂದು ಹೇಳಿದರು.

ರಾಜ್ಯದಲ್ಲಿ ವೈದ್ಯರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಆದರೆ, ಹಳ್ಳಿಗಳಲ್ಲಿ ಕೆಲಸ ಮಾಡುವ ಮನೋಭಾವ ಅವರ
ಲ್ಲಿಲ್ಲ. ವೈದ್ಯರ ಜೊತೆ ಸಂಘರ್ಷ ನಡೆಸದೇ, ಅವರ ಮನವೊಲಿಸಿ ಹಳ್ಳಿಗಳಲ್ಲಿಯೂ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಪ್ರಯತ್ನಿಸುವುದಾಗಿ ಸಚಿವ ಪಾಟೀಲ ಹೇಳಿದರು.

**‌

ಸಿಟಿ ಸ್ಕ್ಯಾನ್ ಯಂತ್ರಕ್ಕೆ ಚಾಲನೆ..

ಬಾಗಲಕೋಟೆಯ ನವನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಅಳವಡಿಸಿರುವ ಸಿಟಿ ಸ್ಕ್ಯಾನ್ ಯಂತ್ರವನ್ನು ಸಾರ್ವಜನಿಕ ಬಳಕೆಗೆ ಸಚಿವ ಶಿವಾನಂದ ಪಾಟೀಲ ಭಾನುವಾರ ಮುಕ್ತಗೊಳಿಸಿದರು.

‘ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿರುವ ಎಲ್ಲಾ ಆಸ್ಪತ್ರೆಗಳಲ್ಲೂ ಸಿಟಿ ಸ್ಕ್ಯಾನ್‌ ಯಂತ್ರ ಅಳವಡಿಸಲಾಗುತ್ತಿದೆ. ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳಿಗೆ ಉಚಿತವಾಗಿ ಸಿಟಿ ಸ್ಕ್ಯಾನ್ ಸೇವೆ ಒದಗಿಸಲಾಗುವುದು. ಇದೇ ಸೇವೆ ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯಲು ₹ 3ರಿಂದ ₹ 4 ಸಾವಿರ ಶುಲ್ಕ ತೆರಬೇಕಿದೆ’ ಎಂದು ಸಚಿವರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !