7

‘ಎನ್‌ಪಿಎಸ್‌ ರದ್ದಾಗದಿದ್ದರೆ ಹೋರಾಟ’

Published:
Updated:

ಬೆಂಗಳೂರು: ಜೆಡಿಎಸ್‌ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ನೂತನ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್‌) ರದ್ದುಗೊಳಿಸದೆ ಇರುವುದರಿಂದ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘ ಎಚ್ಚರಿಕೆ ನೀಡಿದೆ.

ಎನ್‌‍ಪಿಎಸ್ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಬಜೆಟ್‌ನಲ್ಲಿ ಈ ಬಗ್ಗೆ ಯಾವುದೇ ಪ್ರಸ್ತಾಪ ಮಾಡದೆ ಇರುವುದು ನಿರಾಶೆಯನ್ನುಂಟು ಮಾಡಿದೆ ಎಂದು ಸಂಘದ ಅಧ್ಯಕ್ಷ ಶಾಂತಾರಾಮ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರೈತರ ಸಾಲ ಮನ್ನಾ ಮಾಡುವ ಸರ್ಕಾರದ ನಿರ್ಧಾರವನ್ನು ಸಂಘ ಸ್ವಾಗತಿಸಿದೆ.

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !