ಮಂಗಳವಾರ, ಜನವರಿ 28, 2020
24 °C
ನಾಯಕರ ಮನವಿ ಆಲಿಸಿದ ಮಧುಸೂದನ ಮಿಸ್ತ್ರಿ, ಭಕ್ತಚರಣದಾಸ್

ಕೆಪಿಸಿಸಿಗೆ ನೂತನ ಅಧ್ಯಕ್ಷ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಪಿಸಿಸಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆಗಳಿದ್ದು, ಈ ಬಗ್ಗೆ ಪಕ್ಷದ ಹೈಕಮಾಂಡ್ ಶೀಘ್ರವೇ ನಿರ್ಧಾರ ಕೈಗೊಳ್ಳಲಿದೆ.

ವಿಧಾನಸಭೆ ವಿರೋಧ ಪಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕನ ಸ್ಥಾನವನ್ನು ಪ್ರತ್ಯೇಕಿಸಿ ಇಬ್ಬರಿಗೆ ನೀಡುವಂತೆ ವರಿಷ್ಠರ ಮೇಲೆ ರಾಜ್ಯ ನಾಯಕರು ಒತ್ತಡ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉಪಚುನಾವಣೆ ಫಲಿತಾಂಶ ಬಳಿಕವಿಧಾನಸಭೆ ವಿರೋಧ ಪಕ್ಷದ ನಾಯಕನಸ್ಥಾನಕ್ಕೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು. ನಾಯಕರುನೀಡಿರುವ ರಾಜೀನಾಮೆ ಒಪ್ಪಿಕೊಳ್ಳಬೇಕೆ, ಬೇರೆಯವರನ್ನು ನೇಮಿಸಬೇಕೆಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚನೆ ಮೇರೆಗೆ ಮುಖಂಡರಾದ ಮಧುಸೂದನ ಮಿಸ್ತ್ರಿ, ಭಕ್ತಚರಣದಾಸ್ ಗುರುವಾರ ನಗರಕ್ಕೆ ಭೇಟಿ ನೀಡಿದ್ದರು.

ಮಲ್ಲಿಕಾರ್ಜುನ ಖರ್ಗೆ ಹೊರತುಪಡಿಸಿ ಬಹುತೇಕ ನಾಯಕರು ಭೇಟಿಯಾದರು. ಅಭಿಪ್ರಾಯ ಸಂಗ್ರಹಿಸಲು ಸುಮಾರು 50 ಜನರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಕೇಂದ್ರ ನಾಯಕರು ಬಂದಿದ್ದರು.

‘ಸಿದ್ದರಾಮಯ್ಯ ಹೇಳಿದಂತೆ ದಿನೇಶ್ ನಡೆದುಕೊಳ್ಳುತ್ತಿದ್ದು, ಅವರನ್ನುಅಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡಬೇಕು’ ಎಂದು ಬಹುತೇಕ ನಾಯಕರು ಪಟ್ಟುಹಿಡಿದಿದ್ದು, ಯಾರನ್ನೆಲ್ಲ ಈ ಸ್ಥಾನಕ್ಕೆ ಪರಿಗಣಿಸಬಹುದು ಎಂಬ ಸಲಹೆಗಳನ್ನೂ ನೀಡಿದ್ದಾರೆ.

ಅಸಮಾಧಾನ: ಸಿದ್ದರಾಮಯ್ಯ ವಿರುದ್ಧಹಿರಿಯರು ಅಸಮಾಧಾನ ತೋಡಿಕೊಂಡಿದ್ದಾರೆ. ‘ಅವರು ಅಧಿಕಾರ ಅನುಭವಿಸಿದರೂ ಪಕ್ಷ ಸಂಘಟನೆಗೆ ಒತ್ತು ನೀಡಲಿಲ್ಲ. ಉಪಚುನಾವಣೆಯನ್ನೂ ಸರಿಯಾಗಿ ನಿರ್ವಹಿಸಲಿಲ್ಲ. ಎರಡು ಪ್ರಮುಖ ಸಮುದಾಯಗಳಾದ ಲಿಂಗಾಯತರು, ಒಕ್ಕಲಿಗರನ್ನು ಎದುರು ಹಾಕಿಕೊಂಡರು. ಇದರಿಂದಾಗಿ ಚುನಾವಣೆಗಳಲ್ಲಿ ಸತತವಾಗಿ ಕಾಂಗ್ರೆಸ್ ಹಿನ್ನಡೆ ಅನುಭವಿಸಬೇಕಾಯಿತು’ ಎಂದು ದೂರಿದರು ಎನ್ನಲಾಗಿದೆ.

‘ಸಿದ್ದರಾಮಯ್ಯ ಅವರನ್ನೂ ಒಳಗೊಂಡಂತೆ ಅಧಿಕಾರ ಹಂಚಿಕೆ ಮಾಡಬೇಕು. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು, ಹಿರಿಯ ಮುಖಂಡರು ಸೇರಿದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂತೆ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು’ ಎಂದು ಸಲಹೆ ಮಾಡಿದರು ಎನ್ನಲಾಗಿದೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು