ಭಾನುವಾರ, ಮೇ 31, 2020
27 °C

ಪ್ರಾಧ್ಯಾಪಕರ ವರ್ಗಾವಣೆಗೆ ಹೊಸ ನಿಯಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಪದವಿ ಕಾಲೇಜುಗಳ ಪ್ರಾಧ್ಯಾಪಕರ ವರ್ಗಾವಣೆಗೆ ಈಗಿರುವ ಕಾನೂನು ರದ್ದುಗೊಳಿಸಿ, ಹೊಸ ನಿಯಮಗಳನ್ನು ರೂಪಿಸಲಾಗುವುದು. ಅದನ್ನು ಈ ವರ್ಷದಿಂದಲೇ ಜಾರಿಗೆ ತರಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರೊಂದಿಗೆ ಗುರುವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಕಳೆದ 3-4 ವರ್ಷಗಳಿಂದ ಪ್ರಾಧ್ಯಾಪಕರ ವರ್ಗಾವಣೆ ಆಗಿಲ್ಲ. ಹಾಗಾಗಿ ಈ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ ಹೊಸ ನಿಯಮಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.

ವರ್ಗಾವಣೆ ಕುರಿತು ಕರಡು ನಿಯಮ ರೂಪಿಸಿ ಪ್ರಾಧ್ಯಾಪಕರ ಸಂಘದವರಿಗೆ ಮತ್ತು ಸಂಬಂಧಪಟ್ಟ ಎಲ್ಲರಿಗೂಕಳುಹಿಸಿ, ಸಲಹೆಗಳನ್ನು ಪಡೆಯಲಾಗುವುದು. ನಂತರ ಕಾನೂನು ತಿದ್ದುಪಡಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು