ಗುರುವಾರ , ಜುಲೈ 29, 2021
21 °C
ಜೂನ್ 25ರಂದು ಮದುವೆಯಾಗಿದ್ದ ಯುವಕ ಜೂನ್ 30ರಂದು ಕೊನೆಯುಸಿರು

ಕೋವಿಡ್‌ನಿಂದ ಮದುಮಗ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಭಟ್ಕಳದಲ್ಲಿ ಜೂನ್ 25ರಂದು ಮದುವೆಯಾಗಿದ್ದ 25 ವರ್ಷದ ಯುವಕ, ಜೂನ್ 30ರಂದು ಕೋವಿಡ್ 19ನಿಂದ ಮಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಅವರ ಮದುವೆಯಲ್ಲಿ ಭಾಗವಹಿಸಿದ್ದ ಸುಮಾರು 70 ಜನರ ಗಂಟಲುದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೂಲತಃ ಭಟ್ಕಳದವರಾದ ಆ ಯುವಕ, ಬೆಂಗಳೂರಿನಲ್ಲಿ ಹುಟ್ಟಿ ಬೆಳೆದವರು. ಅವರ ಕುಟುಂಬ ಮಂಗಳೂರಿನಲ್ಲಿ ನೆಲೆಸಿದೆ. ಮೂಲ ಮನೆಯಲ್ಲಿ ಮದುವೆಯಾದ ಅವರು ಜೂನ್ 26ರಂದು ಮಂಗಳೂರಿಗೆ ತೆರಳಿದ್ದರು. ಅಲ್ಲಿ ಅವರನ್ನು ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಗಂಟಲು ದ್ರವದ ಮಾದರಿಯ ಪರೀಕ್ಷಾ ವರದಿ ಬರುವ ಮೊದಲೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ’ ಎಂದು ಮಾಹಿತಿ ನೀಡಿದರು.

ಯಲ್ಲಾಪುರಕ್ಕೆ ಮಹಾರಾಷ್ಟ್ರದಿಂದ ಬಂದು ತಾಲ್ಲೂಕು ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿದ್ದ 69 ವರ್ಷದ ಮಹಿಳೆ, ಹೃದಯ ಸ್ತಂಭನದಿಂದ ಮಂಗಳವಾರ ಮೃತಪಟ್ಟಿದ್ದಾರೆ. ಅವರಿಗೂ ಕೋವಿಡ್ 19 ಪಾಸಿಟಿವ್ ಬಂದಿದೆ. ಆದರೆ, ಅವರು ಸೋಂಕಿನಿಂದಾಗಿಯೇ ಮೃತಪಟ್ಟಿದ್ದಲ್ಲ ಎಂದು ತಿಳಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು