ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ; ಆತಂಕ

Last Updated 2 ಮೇ 2019, 21:30 IST
ಅಕ್ಷರ ಗಾತ್ರ

ಸುಂಟಿಕೊಪ್ಪ: ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷಗೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ಉಂಟು ಮಾಡಿದೆ.

ಆಹಾರದ ಕೊರತೆಯಿಂದ ಬಳಲುತ್ತಿರುವ ಕಾಡಾನೆಗಳು ಸುತ್ತಮುತ್ತಲಿನ ಕಾಫಿ, ಮೆಣಸು, ಹಲಸಿನ ತೋಟಗಳಿಗೆ ಲಗ್ಗೆಯಿಡುತ್ತಿದ್ದು, ಫಸಲಿಗೆ ಬಂದ ಬೆಳೆ ಹಾನಿಯಾಗುತ್ತಿದೆ.

ಗುರುವಾರ ಮಧ್ಯಾಹ್ನದ ವೇಳೆಯೇ ಸಮೀಪದ ಶ್ರೀದೇವಿ ತೋಟದಲ್ಲಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಹೆದರಿ ಅಲ್ಲಿಂದ ಓಡಿಹೋಗಿದ್ದಾರೆ. ಇದರಿಂದ ಹೆದರಿದ ಕಾಡಾನೆ ಅಲ್ಲಿನ‌ ಕಾಫಿ ಗಿಡಗಳನ್ನು ತುಳಿದು‌ ನಾಶಪಡಿಸಿ ಅಲ್ಲಿಂದ ಪಕ್ಕದ ತೋಟದತ್ತ ಪಲಾಯನ ಮಾಡಿದೆ.

ಬುಧವಾರ ರಾತ್ರಿ‌ ನೆಟ್ಲಿ ‘ಬಿ’ ತೋಟದ ಕಾರ್ಮಿಕರ ಲೈನ್ ಮನೆಯತ್ತ ಹಾದು ಹೋಗಿದ್ದು, ಕಾರ್ಮಿಕರು ಭಯಭೀತರಾಗಿದ್ದಾರೆ.

ಪನ್ಯ, ನಾಕೂರು, ಕಂಬಿಬಾಣೆ, ಮತ್ತಿಕಾಡು ಭಾಗಗಳಲ್ಲೂ ಕಾಡಾನೆಗಳು ಬೆಳೆದು ನಿಂತ ಫಸಲುಗಳನ್ನು ತಿಂದು ನಾಶ ಪಡಿಸುತ್ತಿವೆ.

ಈ ಭಾಗಗಳಲ್ಲಿ ರಾತ್ರಿ ವೇಳೆಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಈಚೆಗೆ ಹಗಲು ಹೊತ್ತಿನಲ್ಲೂ ದಾಳಿ ಮಾಡುತ್ತಿರುವುದರಿಂದ ಕಾರ್ಮಿಕರು, ಸಾರ್ವಜನಿಕರು ಹಾಗೂ ವಾಹನ ಚಾಲಕರು ಓಡಾಡಲು ಭಯ ಪಡುವಂತಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT