ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಗಾಲ: ಮರ ಕಡಿತಲೆಗೆ ಅವಕಾಶ ಇಲ್ಲ

ಕೊಡಗು: ವೃಕ್ಷ ಪ್ರಾಧಿಕಾರ ಸಭೆಯಲ್ಲಿ ತೀರ್ಮಾನ
Last Updated 18 ಜೂನ್ 2019, 14:56 IST
ಅಕ್ಷರ ಗಾತ್ರ

ಮಡಿಕೇರಿ: ಮರ ಕಡಿತಲೆ ಮತ್ತು ಸಾಗಾಟಕ್ಕೆ ಸೆಪ್ಟೆಂಬರ್ ಅಂತ್ಯದವರೆಗೆ ನಿರ್ಬಂಧ ಹೇರಲಾಗಿದ್ದು, ಮಳೆಗಾಲದ ಅವಧಿಯಲ್ಲಿ ಯಾವುದೇ ರೀತಿಯ ಮರಗಳನ್ನು ಕಡಿಯಲು ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದರು.

ನಗರದ ಅರಣ್ಯ ಭವನದಲ್ಲಿ ಸೋಮವಾರ ಜಿಲ್ಲೆಯ ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 808 ಮರಗಳ ಹನನ ಹಿನ್ನೆಲೆಯಲ್ಲಿ ನಡೆದ ವೃಕ್ಷ ಪ್ರಾಧಿಕಾರ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಮಳೆಗಾಲ ಆರಂಭವಾಗಿರುವುದರಿಂದ ಜತೆಗೆ ಕಳೆದ ಮಳೆಗಾಲದಲ್ಲಿ ಪ್ರಕೃತಿ ವಿಕೋಪದಿಂದ ಉಂಟಾದ ಸಮಸ್ಯೆಯಿಂದ ಭಾರತೀಯ ಭೂ ಸರ್ವೇಕ್ಷಣಾ ಇಲಾಖೆ (ಜಿಎಸ್‌ಐ), ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದ ಹಾಗೂ ಸಂಭವಿಸಬಹುದಾದ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿದೆ. ಇಂತಹ ಪ್ರದೇಶಗಳಲ್ಲಿ ವೈಯಕ್ತಿಕ ಉಪಯೋಗಕ್ಕೆ ಮರ ಕಡಿಯುವುದನ್ನು ಹೊರತುಪಡಿಸಿ ಸಾಮೂಹಿಕ ಅಥವಾ ಬೃಹತ್ ಪ್ರಮಾಣದಲ್ಲಿ ಮರಗಳ ಕಡಿತಲೆಗೆ ಅನುಮತಿ ನೀಡದಿರಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಜಿಲ್ಲೆಯಲ್ಲಿ ಕೃಷಿಕರು ಹಾಗೂ ಬೆಳೆಗಾರರು ಸ್ವಂತ ಉಪಯೋಗಕ್ಕೆ ಒಂದು ಕೃಷಿಕ ಕುಟುಂಬಕ್ಕೆ 15 ವರ್ಷದವರೆಗೆ 300 ಸಿಎಫ್‌ಟಿ ಮರ ಬಳಕೆಗೆ ಮಾತ್ರ ಅವಕಾಶ ನೀಡುವ ಬಗ್ಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸರಾಜ ಉಪಸ್ಥಿತಿಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.

ಸೂಕ್ಷ್ಮ ಪ್ರದೇಶ ಹೊರತುಪಡಿಸಿ ಜಿಲ್ಲೆಯಲ್ಲಿ ಉಳಿದ ಕಡೆ ಮರ ಕಡಿತಲೆಗೆ ಅನುಮತಿ ಕೋರಿ ಬರುವ ಪ್ರಕರಣಗಳಲ್ಲಿ ಒಂದು ಎಕರೆಯಲ್ಲಿ 10 ಮರ ಮೀರದಂತೆ 5 ವರ್ಷಗಳಿಗೊಮ್ಮೆ ಮಾತ್ರ ಅನುಮತಿ ನೀಡುವ ಬಗ್ಗೆ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT