ಅರೆಭಾಷೆ ಅಕಾಡೆಮಿ: ಮೂವರಿಗೆ ಪ್ರಶಸ್ತಿ

7

ಅರೆಭಾಷೆ ಅಕಾಡೆಮಿ: ಮೂವರಿಗೆ ಪ್ರಶಸ್ತಿ

Published:
Updated:
Prajavani

ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ 2018ನೇ ಸಾಲಿನ ಗೌರವ ಪ್ರಶಸ್ತಿಗೆ ಮೂವರು ಸಾಧಕರು ಭಾಜನರಾಗಿದ್ದಾರೆ.

ಮಡಿಕೇರಿ ತಾಲ್ಲೂಕು ಪೆರಾಜೆ ಗ್ರಾಮದ ಪ್ರೊ.ಕೋಡಿ ಕುಶಾಲಪ್ಪಗೌಡ (ಅರೆಭಾಷೆ ಸಾಹಿತ್ಯ ಕ್ಷೇತ್ರ), ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಡಾ.ಎನ್.ಸುಕುಮಾರಗೌಡ (ಅಧ್ಯಯನ ಮತ್ತು ಸಂಶೋಧನಾ ಕ್ಷೇತ್ರ), ಮಡಿಕೇರಿ ತಾಲ್ಲೂಕು ಬಿಳಿಗೇರಿ ಗ್ರಾಮದ ಕಾಳೆಯಂಡ ತಂಗಮ್ಮ ಅಪ್ಪಚ್ಚ (ಅರೆಭಾಷೆ ಸಂಸ್ಕೃತಿ ಕ್ಷೇತ್ರ) ಅವರಿಗೆ ಈ ಬಾರಿಯ ಪ್ರಶಸ್ತಿ ನೀಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರಶಸ್ತಿ ಪುರಸ್ಕೃತರಿಗೆ ತಲಾ ₹ 50 ಸಾವಿರ ನಗದು, ಫಲಕ ನೀಡಿ ಗೌರವಿಸಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !