ಗುರುವಾರ , ಅಕ್ಟೋಬರ್ 17, 2019
21 °C

ತೋರಾ ಭೂಕುಸಿತ: ನಾಲ್ಕು ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ

Published:
Updated:

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ತೋರಾ ಗ್ರಾಮದಲ್ಲಿ ಆಗಸ್ಟ್‌ನಲ್ಲಿ ಸುರಿದ ಭಾರಿ ಮಳೆಯಿಂದ ಸಂಭವಿಸಿದ್ದ ಭೂಕುಸಿತದಿಂದ ನಾಲ್ವರು ಕಣ್ಮರೆಯಾಗಿದ್ದು ಇನ್ನೂ ಆ ಮೃತದೇಹಗಳು ಪತ್ತೆಯಾಗಿಲ್ಲ.

ಕಣ್ಮರೆಯಾದ ಪ್ರಕರಣವನ್ನು ವಿಶೇಷವೆಂದು ಪರಿಗಣಿಸಿದ ರಾಜ್ಯ ಸರ್ಕಾರವು ನಾಲ್ವರ ಕುಟುಂಬಕ್ಕೆ ತಲಾ ₹ 5 ಲಕ್ಷದಂತೆ ಪರಿಹಾರ ನೀಡಲು ನಿರ್ಧರಿಸಿದೆ.

ಈ ಸಂಬಂಧ ಜಿಲ್ಲಾಡಳಿತಕ್ಕೂ ಆದೇಶ ಬಂದಿದೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌  ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. 

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 4 ಮಂದಿಯ ಕುಟುಂಬಕ್ಕೆ ತಲಾ ₹ 1 ಲಕ್ಷದಂತೆ ತಾತ್ಕಾಲಿಕ ಪರಿಹಾರ ನೀಡಲಾಗಿತ್ತು. ಈಗ ಸರ್ಕಾರದ ಆದೇಶದಂತೆ ಪೂರ್ಣ ಪ್ರಮಾಣದ ಪರಿಹಾರ ಸಿಗಲಿದೆ. 

ತೋರಾದ ಹರೀಶ್ ಮತ್ತು ಪ್ರಭು ಕುಟುಂಬದ ಒಟ್ಟು ನಾಲ್ವರು ಕಣ್ಮರೆಯಾಗಿದ್ದು ಇನ್ನೂ ಮೃತದೇಹಗಳು ಸಿಕ್ಕಿಲ್ಲ. 22 ದಿನ ನಡೆದ ಕಾರ್ಯಾಚರಣೆ ವಿಫಲವಾಗಿತ್ತು. 

ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್‌ ಡಿ. ಪನ್ನೇಕರ್‌ ಅವರು ವಿಶೇಷ ಪ್ರಕರಣವೆಂದು ಪರಿಗಣಿಸಲು ಸರ್ಕಾರಕ್ಕೆ ಪತ್ರ ಬರೆದಿದ್ದರು. ಎನ್‌ಡಿಆರ್‌ಎಫ್‌, ಗರುಡ, ಪೊಲೀಸ್, ಸ್ಥಳೀಯರಿಂದ ಶೋಧ ನಡೆದಿತ್ತು. 

Post Comments (+)