ಸೋಮವಾರ, ಏಪ್ರಿಲ್ 6, 2020
19 °C

ಮತ್ತೆ ನಾಲ್ಕು ನೆಗೆಟಿವ್‌ ವರದಿ: ಸ್ವಲ್ಪ ನಿರಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಜಿಲ್ಲಾ ಆಸ್ಪತ್ರೆಯ ಐಸೋಲೇಷನ್‌ ವಾರ್ಡ್‌ನಲ್ಲಿದ್ದ ನಾಲ್ಕು ಮಂದಿಯ ವೈದ್ಯಕೀಯ ವರದಿ ಬಂದಿದ್ದು ಎಲ್ಲವೂ ನೆಗೆಟಿವ್‌ ಆಗಿದೆ. ಇದರಿಂದ ಜಿಲ್ಲೆಯ ಜನರು ಸ್ವಲ್ಪಮಟ್ಟಿಗೆ ನಿರಾಳರಾಗಿದ್ದಾರೆ. ಇವರನ್ನು 14 ದಿನಗಳ ಕಾಲ ಮನೆಯಲ್ಲೇ ಇರುವಂತೆ ಸೂಚಿಸಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ವರದಿ ನಿರೀಕ್ಷೆ: ‌‌ಸೋಂಕು ತಗುಲಿದ ವ್ಯಕ್ತಿಯನ್ನು ಐಸೋಲೇಷನ್‌ ವಾರ್ಡ್‌ನಲ್ಲಿಟ್ಟು ನಿಗಾ ವಹಿಸಲಾಗುತ್ತಿದೆ. ಆ ವ್ಯಕ್ತಿ ಸ್ಪಂದಿಸುತ್ತಿದ್ದಾನೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸೋಂಕು ತಗುಲಿದ ವ್ಯಕ್ತಿ ಸಂಪರ್ಕದಲ್ಲಿದ್ದ 20 ಮಂದಿಯನ್ನು ಮನೆಯಲ್ಲೇ ತಪಾಸಣೆಗೆ ಒಳಪಡಿಸಲಾಗಿದ್ದು, ವೈದ್ಯಕೀಯ ವರದಿ ಮಂಗಳವಾರ ಸಂಜೆ ಬರಲಿದೆ ಎಂದು ಡಿಎಚ್‌ಒ ಡಾ.ಮೋಹನ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು