ಭಾನುವಾರ, ಏಪ್ರಿಲ್ 5, 2020
19 °C

ಕತ್ತಿ ಸೇರಿ ಮೂವರು ಸಂಪುಟಕ್ಕೆ: ಬಿ.ಎಸ್‌. ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

BS Yediyurappa

ನವದೆಹಲಿ: ಬಜೆಟ್‌ ಅಧಿವೇಶನದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಹುಕ್ಕೇರಿ ಶಾಸಕ ಉಮೇಶ ಕತ್ತಿ ಸೇರಿದಂತೆ ಮೂವರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗೌರವಾರ್ಥ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಔತಣಕೂಟದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಪಕ್ಷದಿಂದ ಬಂದಿರುವ 10 ಜನರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಈಗ ಬಿಜೆಪಿಯಲ್ಲಿರುವ ಆಕಾಂಕ್ಷಿಗಳಿಗೆ ಅವಕಾಶ ದೊರೆಯಲಿದೆ ಎಂದರು.

ಅಕ್ಕಿ ಕಡಿತಗೊಳಿಸಿ ಗೋಧಿ:ರಾಜ್ಯ ಬಜೆಟ್‌ ಮಂಡನೆಗೆ ಎಲ್ಲ ಸಿದ್ಧತೆಗಳೂ ನಡೆದಿವೆ. ‘ಅನ್ನಭಾಗ್ಯ’ ಯೋಜನೆ ಅಡಿ ನೀಡಲಾಗುವ ಅಕ್ಕಿಯಲ್ಲಿ ಎರಡು ಕೆ.ಜಿ. ಕಡಿತಗೊಳಿಸಿ ಗೋಧಿ ವಿತರಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ವಿವರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು