ನಿಖಿಲ್ ಕುಮಾರಸ್ವಾಮಿ ಮದುವೆ: ರಾಜ್ಯ ಸರ್ಕಾರದಿಂದ ವಿವರ ಕೇಳಿದ ಹೈಕೋರ್ಟ್

ಬೆಂಗಳೂರು: ‘ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಸಮಾರಂಭದಲ್ಲಿ ಅಂತರ ಕಾಯ್ದುಕೊಳ್ಳಲಾಗಿತ್ತೇ ಎಂಬ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಕೋವಿಡ್-19 ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ತಾಪತ್ರಯಗಳಿಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳಚಾರ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಅವರು ನಿಖಿಲ್ ಕುಮಾರಸ್ವಾಮಿ ಮದುವೆ ವಿಚಾರ ಪ್ರಸ್ತಾಪಿಸಿದರು.
‘ಮದುವೆಯಲ್ಲಿ ಎಷ್ಟು ಜನ ಭಾಗವಹಿಸಿದ್ದರು, ಸಮಾರಂಭದಲ್ಲಿ ಅಂತರವನ್ನು ಕಾಯ್ದುಕೊಳ್ಳಲಾಗಿತ್ತೇ ಎಂಬ ಬಗ್ಗೆ ಪರಿಶೀಲನೆ ನಡೆಸಿ ಕೋರ್ಟ್ಗೆ ವರದಿ ಸಲ್ಲಿಸಿ’ ಎಂದು ಸರ್ಕಾರಿ ವಕೀಲರಿಗೆ ಸೂಚಿಸಿದರು.
ಅಂತೆಯೇ, ‘ಕೆಲವೆಡೆ ಜನಪ್ರತಿನಿಧಿಗಳು ಜನರಿಗೆ ಆಹಾರ, ದಿನಸಿ ಹಾಗೂ ಅಗತ್ಯ ವಸ್ತುಗಳ ವಿತರಣೆ ವೇಳೆ ಅಂತರ ಕಾಯ್ದುಕೊಂಡಿಲ್ಲ’ ಎಂದೂ ಓಕಾ ಅವರು ಬೇಸರ ವ್ಯಕ್ತಪಡಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.