ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9 ಜಿಲ್ಲೆಗಳಲ್ಲಿ ಮಾರ್ಚ್‌ 31ರವರೆಗೆ ಲಾಕ್‌ಡೌನ್: ನಾಳೆಯೂ ಇರಲ್ಲ ಸಾರಿಗೆ ಸೇವೆ

ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಗೆ ತುರ್ತು ಕ್ರಮ
Last Updated 22 ಮಾರ್ಚ್ 2020, 11:06 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ವೈರಸ್‌ ಸೋಂಕು (ಕೋವಿಡ್–19) ಹರಡುವುದನ್ನು ತಡೆಗಟ್ಟುವ ಸಲುವಾಗಿ ಬೆಂಗಳೂರು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ತುರ್ತು ಸಭೆ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ‌ನಾಳೆಯೂ ಸಾರ್ವಜನಿಕ ಸಾರಿಗೆ ವ್ಯವಸ್ಥೆ ರದ್ದುಗೊಳಿಸಲಾಗಿದೆ. ಎಸಿ ಬಸ್ ಸೇವೆ ಮಾರ್ಚ್‌ 31ರವರೆಗೆ ಇರುವುದಿಲ್ಲ’ ಎಂದರು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಧಾರವಾಡ, ಮೈಸೂರು, ಕೊಡಗು, ಕಲಬುರ್ಗಿ, ಬೆಳಗಾವಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾರ್ಚ್ 31ರ ವರೆಗೆ ಲಾಕ್‌ಡೌನ್ ಮುಂದುವರಿಯಲಿದೆ. ಈ 9 ಜಿಲ್ಲೆಗಳಲ್ಲಿ ವೈದ್ಯಕೀಯ, ಔಷದಿ, ದಿನಸಿ, ಕೃಷಿ ಮೊದಲಾದ ಅಗತ್ಯ ಸೇವೆ ಹೊರತುಪಡಿಸಿ ಸಾರಿಗೆ ಸೇರಿದಂತೆ ಯಾವುದೇ ವ್ಯವಸ್ಥೆ ಇರುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಈ 9 ಜಿಲ್ಲೆಗಳಲ್ಲಿ ಕಾರ್ಮಿಕರು ಹೆಚ್ಚಿರುವ ಕೈಗಾರಿಕೆಗಳಲ್ಲಿ, ದಿನ ಬಿಟ್ಟು ದಿನ ಅರ್ಧ ಸಂಖ್ಯೆಯಲ್ಲಿ ಕಾರ್ಮಿಕರನ್ನು ನಿಯೋಜಿಸಬೇಕು. ಈ 9 ಜಿಲ್ಲೆಗಳಲ್ಲಿ ಅಂತರ ಜಿಲ್ಲೆಯ ಸಾರಿಗೆ ವ್ಯವಸ್ಥೆಯನ್ನು ಮಾರ್ಚ್ 31ರರವರೆಗೆ ಸ್ಥಗಿತಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇಂದು ರಾತ್ರಿ 9 ಗಂಟೆಗೆ ಜನತಾ ಕರ್ಫ್ಯೂ ಮುಗಿಯಲಿದೆ. ಆದರೆ ರಾತ್ರಿ 9 ಗಂಟೆಯಿಂದ 12 ಗಂಟೆಯವರೆಗೂ ಸೆಕ್ಷನ್ 144ಜಾರಿಗೊಳಿಸಲಾಗಿದೆ ಎಂದೂ ಸಚಿವರು ತಿಳಿಸಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT