ಮಂಗಳವಾರ, ಮೇ 18, 2021
24 °C
ಶಿವಮೊಗ್ಗ ಬಿಜೆಪಿ ಮಹಿಳಾ ಸಮಾವೇಶ

ಉಗ್ರರ ವಿರುದ್ಧ ಕ್ರಮ ಕೈಗೊಳ್ಳದ ಯುಪಿಎ- ನಿರ್ಮಲಾ ಸೀತಾರಾಮನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಮುಂಬೈ ದಾಳಿ (2008) ನಂತರ ಅಂದಿನ ಯುಪಿಎ ಸರ್ಕಾರ ಉಗ್ರರ ವಿರುದ್ಧ ದಿಟ್ಟ ಕ್ರಮ ಕೈಗೊಂಡಿದ್ದರೆ ಉರಿ, ಪುಲ್ವಾಮಾದಂತಹ ಘಟನೆಗಳು ಮರುಕಳಿಸುತ್ತಿರಲಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ದೂರಿದರು.

ಬಿಜೆಪಿ ಸೋಮವಾರ ಹಮ್ಮಿಕೊಂಡಿದ್ದ ಮಹಿಳಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಉರಿ ದಾಳಿಯ ನಂತರ ಗಡಿರೇಖೆ ಸಮೀಪ ಇದ್ದ ಉಗ್ರರ ಅಡಗುದಾಣಗಳ ಮೇಲೆ ನಿರ್ದಿಷ್ಟ ದಾಳಿ ನಡೆಸಿ ಅಲ್ಲಿನ ತರಬೇತಿ ಕೇಂದ್ರಗಳನ್ನು ನಾಶ ಮಾಡಲಾಯಿತು. ಪುಲ್ವಾಮಾ ಘಟನೆಯ ನಂತರ ಪಾಕ್‌ ಗಡಿಯ ಒಳಗೆ ಹೋಗಿ ಬಾಲಕೋಟ್‌ನಲ್ಲಿದ್ದ ಶಿಬಿರಗಳನ್ನು ಧ್ವಂಸ ಮಾಡಲಾಯಿತು. ಅಂದು ಕಠಿಣ ನಿರ್ಧಾರ ತೆಗೆದುಕೊಳ್ಳದ ಕಾಂಗ್ರೆಸ್ ಮುಖಂಡರು ಈಗ ಸೇನಾ ವಿಷಯವನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂಬ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ಕೇಂದ್ರದ ಯೋಜನೆಗಳಿಗೆ ಅಡ್ಡಗಾಲು: ಸೈನಿಕರಿಗೆ ನೀಡುವಷ್ಟೇ ಗೌರವವನ್ನು ಮೋದಿ ದೇಶದ ರೈತರಿಗೂ ನೀಡುತ್ತಿದ್ದಾರೆ. ರೈತರಿಗೆ ಆರ್ಥಿಕ ನೆರವು ನೀಡಲು ಪ್ರಧಾನ ಮಂತ್ರಿ ರೈತ ಸಮ್ಮಾನ್ ಯೋಜನೆ ಜಾರಿಗೆ ತಂದಿದ್ದಾರೆ. ಮೊದಲ ಕಂತಿನಲ್ಲಿ 3 ಕೋಟಿ ರೈತರ ಖಾತೆಗಳಿಗೆ ತಲಾ ₹ 2 ಸಾವಿರ ಹಣ ಜಮೆ ಮಾಡಲಾಗಿದೆ. ಆದರೆ, ರಾಜ್ಯ ಸರ್ಕಾರದ ಅಸಹಕಾರದ ಪರಿಣಾಮ ಇಲ್ಲಿನ 17 ರೈತರಿಗೆ ಮಾತ್ರ ಯೋಜನೆಯ ಫಲ ದೊರಕಿದೆ. ಕೇಂದ್ರದ ಯೋಜನೆಗಳಿಗೆ ರಾಜ್ಯ ಅಡ್ಡಗಾಲು ಹಾಕುತ್ತಿದೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು