ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆಯಲ್ಲಿ ಮಸೀದಿ ಬೇಡ: ನಿಶ್ಚಲಾನಂದ ಸರಸ್ವತಿ ಸ್ವಾಮೀಜಿ

Last Updated 27 ನವೆಂಬರ್ 2019, 16:31 IST
ಅಕ್ಷರ ಗಾತ್ರ

ಉಡುಪಿ: ‘ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಒಂದಿಂಚು ಭೂಮಿ ಕೊಡುವುದಕ್ಕೂ ನನ್ನ ಸಹಮತ ಇಲ್ಲ’ ಎಂದುಪುರಿಯ ಗೋವರ್ಧನ ಪೀಠದ ನಿಶ್ಚಲಾನಂದ ಸರಸ್ವತಿ ಸ್ವಾಮೀಜಿ ಅಭಿಪ್ರಾಯಪಟ್ಟರು.‌

ಬುಧವಾರ ಪೇಜಾವರ ಮಠದಲ್ಲಿ ವಿಶ್ವೇಶತೀರ್ಥ ಶ್ರೀಗಳನ್ನು ಭೇಟಿಮಾಡಿ ಉಭಯ ಕುಶಲೋಪರಿ ನಡೆಸುತ್ತಾ ಮಾತನಾಡಿದ ಅವರು, ‘ಅಯೋಧ್ಯೆಯಲ್ಲಿ5 ಎಕರೆ ಭೂಮಿ ಪಡೆದು ಮೆಕ್ಕಾ ನಿರ್ಮಿಸುವ ಹುನ್ನಾರ ನಡೆಯುತ್ತಿದೆ. ಶಾಂತಿಯ ಹೆಸರಿನಲ್ಲಿ ಷಡ್ಯಂತ್ರ ನಡೆಯುತ್ತಿದೆ’ ಎಂದು ಆರೋಪಿಸಿದರು.

‘ಮೂವರು ಮುಸ್ಲಿಮರನ್ನು ರಾಷ್ಟ್ರಪತಿಗಳನ್ನಾಗಿ, ತಲಾ ಒಬ್ಬರು ಗೃಹ ಮಂತ್ರಿ ಹಾಗೂ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಾಧೀಶರನ್ನಾಗಿ ಮಾಡಲಾಗಿದೆ. ಈಗ ನ್ಯಾಯಾಲಯದ ಮೂಲಕ ಅಯೋಧ್ಯೆಯನ್ನು ಕಬಳಿಸಲು ಹೊರಟಿರುವುದು ಸರಿಯಲ್ಲ.ಹಿಂದೂಗಳ ಉದಾರತೆಯನ್ನು ದೌರ್ಬಲ್ಯ ಎಂದು ಭಾವಿಸಬಾರದು’ ಎಂದರು.

‘ಸುಪ್ರೀಂಕೋರ್ಟ್‌ಗಿಂತಲೂ ಸಂಸತ್ತು ದೊಡ್ಡದು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ನಿಜವಾದ ದೇಶಭಕ್ತಿ ಇದ್ದರೆ ಸುಪ್ರೀಂಕೋರ್ಟ್‌ ತೀರ್ಪನ್ನು ತಿರಸ್ಕರಿಸಿ, ರಾಮಜನ್ಮಭೂಮಿಯಲ್ಲಿ ಮಸೀದಿ ನಿರ್ಮಾಣಕ್ಕೆ ಅವಕಾಶ ಕೊಡಬಾರದು’ ಎಂದರು.

ಸುಪ್ರಿಂಕೋರ್ಟ್‌ಗಿಂತಲೂ ಸಂತರು ದೊಡ್ಡವರು, ನಾವೆಲ್ಲರೂ ನ್ಯಾಯಾಧೀಶರಂತೆ. ಸಂವಿಧಾನದ ಹೆಸರಿನಲ್ಲಿ ಎಲ್ಲವನ್ನೂ ಪಾಲಿಸುತ್ತಾ ಹೋದರೆ, ವರ್ಣಾಶ್ರಮ ಧರ್ಮವನ್ನು ಪಾಲಿಸುವವರು ಯಾರು ಎಂದು ನಿಶ್ಚಲಾನಂದ ಸ್ವಾಮೀಜಿ ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT