ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ನಾಯಕರ ವಿಶ್ವಾಸ ಪಡೆದು ರೈತರ ಸಾಲ ಮನ್ನಾ ಮಾಡುವೆ: ಕುಮಾರಸ್ವಾಮಿ

Last Updated 25 ಮೇ 2018, 9:12 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ನಾಯಕರನ್ನು ವಿಶ್ವಾಸಕ್ಕೆ ಪಡೆದು ರೈತರ ಸಾಲಮನ್ನಾ ಮಾಡಲು ಪ್ರಯತ್ನಿಸುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದರು.

ವಿಶ್ವಾಸಮತ ಯಾಚನೆ ಪ್ರಸ್ತಾಪ ಮಂಡಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿದರು.

ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ಅವಕಾಶ ನೀಡಿದ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಸೋನಿಯಾಗಾಂಧಿ, ಪರಮೇಶ್ವರ್‌, ಖರ್ಗೆ ಮತ್ತು ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸಿದರು.

ನಾನಾಗಲಿ, ನಮ್ಮ ಕುಟುಂಬದವರಾಗಲಿ ಅಧಿಕಾರಕ್ಕೆ ಆಸೆ ಪಟ್ಟವರಲ್ಲ, ದೇವೇಗೌಡರು ಪ್ರಧಾನಿ ಹುದ್ದೆಯಿಂದ ಕೆಳಗಿಳಿದಾಗ ವಾಜಪೇಯಿ ಅವರು ಬೆಂಬಲ ನೀಡುವುದಾಗಿ ಒಂದು ಚೀಟಿ ಕಳುಹಿಸಿದ್ದರು ಆದರೆ ನನ್ನ ತಂದೆಯವರು ಬಿಜೆಪಿ ಜೊತೆ ಹೋಗಲ್ಲ ಎಂದು ಹೇಳಿದರು,  ಕಾಂಗ್ರೆಸ್ ಪಕ್ಷದ ನೆರವಿನಿಂದ ನನ್ನ ತಂದೆ ಪ್ರಧಾನಿಯಾದರು, ಇಂದು ನಾನು ಮುಖ್ಯಮಂತ್ರಿಯಾದೆ ಎಂದರು.

2006ರಲ್ಲಿ ಬಿಜೆಪಿ ಜೊತೆ ಸರ್ಕಾರ ರಚಿಸಿದನ್ನು ನೆನಪಿಸಿಕೊಂಡ ಮುಖ್ಯಮಂತ್ರಿ ಕುಮಾರಸ್ವಾಮಿ, ಬಿಜೆಪಿಗೆ ಅಧಿಕಾರ ನೀಡದಿದ್ದಕ್ಕೆ ವಚನ ಭ್ರಷ್ಟ ಎಂಬ ಹಣೆಪಟ್ಟಿ ಕಟ್ಟಿದ್ದರು, ನಾನು ಖಂಡಿತವಾಗಿಯೂ ವಚನ ಭ್ರಷ್ಟ ಅಲ್ಲ, ಅಂದಿನ ಪರಿಸ್ಥಿತಿ, ಪಕ್ಷವನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯ ಇತ್ತು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT