ಗುರುವಾರ , ಜನವರಿ 23, 2020
28 °C

ಇಂದು ಬಂದ್ ಇಲ್ಲ; ಮುಷ್ಕರ ಮಾತ್ರ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ರಾಜ್ಯದಲ್ಲಿ ಬುಧವಾರ ಬಂದ್‌ ಇರುವುದಿಲ್ಲ; ಮುಷ್ಕರ ಮಾತ್ರ ನಡೆಯಲಿದೆ. ಶಾಲಾ ಕಾಲೇಜುಗಳಿಗೆ ರಜೆ ಇರುವುದಿಲ್ಲ. ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರದಲ್ಲಿಯೂ ವ್ಯತ್ಯಯ ಇರುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಗೃಹ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಸಿಐಟಿಯು ಅಧ್ಯಕ್ಷ ಅನಂತ ಸುಬ್ಬರಾವ್ ಜತೆ ಚರ್ಚಿಸಲಾಗಿದ್ದು, ಬಂದ್‌ ಮಾಡುವುದಿಲ್ಲ ಮುಷ್ಕರ ಮಾತ್ರ ಮಾಡುವುದಾಗಿ ತಿಳಿಸಿದ್ದಾರೆ. ಹಾಗಾಗಿ, ನಿತ್ಯದ ಜನಜೀವನಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಸಚಿವರು ತಿಳಿಸಿದರು.

ಮುಷ್ಕರಕ್ಕೆ ಸ್ಥಳ ನಿಗಧಿಪಡಿಸಲಾಗಿದ್ದು, ಮೆರವಣಿಗೆಗೆ ಅವಕಾಶ ನೀಡಿಲ್ಲ. ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು