ಬುಧವಾರ, ಆಗಸ್ಟ್ 4, 2021
21 °C

ಕುರಿ, ಮೇಕೆಗಳಲ್ಲಿ ಸೋಂಕು ಇಲ್ಲ: ಪಶುಪಾಲನಾ ಇಲಾಖೆ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಕುರಿ ಹಾಗೂ ಮೇಕೆಗಳಲ್ಲಿ ಕೊರೊನಾ ಸೋಂಕು ಕಂಡುಬಂದಿಲ್ಲ ಎಂದು ಜಿಲ್ಲಾ ಪಶುಪಾಲನಾ ಇಲಾಖೆ ಸ್ಪಷ್ಟಪಡಿಸಿದೆ.

ಮೇಕೆಗಳಲ್ಲಿ ಕೊರೊನಾ ಮಾದರಿಯ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕು ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ಮೇಕೆಗಳಿಂದ ಸಂಗ್ರಹಿಸಿದ್ದ ಗಂಟಲು ದ್ರವವನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಶುಕ್ರವಾರ ವರದಿ ಬಂದಿದ್ದು, ಕೊರೊನಾ ಸೋಂಕು ದೃಢಪಟ್ಟಿಲ್ಲ.

‘ಕುರಿಗಾಯಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ 10 ಮೇಕೆಗಳ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಬೆಂಗಳೂರು ಪ್ರಯೋಗಾಲಯದ ವರದಿಯಲ್ಲಿ ನೆಗೆಟಿವ್ ಬಂದಿದೆ. ಕುರಿ, ಮೇಕೆಗಳಿಂದ ಕೋವಿಡ್–19 ಹರಡುವುದಿಲ್ಲ. ರೈತರು ಯಾವುದೇ ಆತಂಕ ಇಲ್ಲದೆ ಕುರಿ, ಮೇಕೆಗಳನ್ನು ಸಾಕಬಹುದು. ಸಾರ್ವಜನಿಕರು ಮಾಂಸ ಸೇವಿಸಬಹುದು’ ಎಂದು ಪಶುಪಾಲನೆ ಇಲಾಖೆ ಉಪನಿರ್ದೇಶಕ ಡಾ.ಕೆ.ಜಿ.ನಂದೀಶ್ ತಿಳಿಸಿದ್ದಾರೆ.

ಕುರಿ ಹಾಗೂ ಮೇಕೆಗಳಲ್ಲಿ ಕೊರೊನಾ ಸೋಂಕು ಕಂಡುಬಂದಿಲ್ಲ ಎಂದು ಜಿಲ್ಲಾ ಪಶುಪಾಲನಾ ಇಲಾಖೆ ಸ್ಪಷ್ಟಪಡಿಸಿದೆ.

ಮೇಕೆಗಳಲ್ಲಿ ಕೊರೊನಾ ಮಾದರಿಯ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕು ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ಮೇಕೆಗಳಿಂದ ಸಂಗ್ರಹಿಸಿದ್ದ ಗಂಟಲು ದ್ರವವನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಶುಕ್ರವಾರ ವರದಿ ಬಂದಿದ್ದು, ಕೊರೊನಾ ಸೋಂಕು ದೃಢಪಟ್ಟಿಲ್ಲ.

‘ಕುರಿಗಾಯಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ 10 ಮೇಕೆಗಳ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಬೆಂಗಳೂರು ಪ್ರಯೋಗಾಲಯದ ವರದಿಯಲ್ಲಿ ನೆಗೆಟಿವ್ ಬಂದಿದೆ. ಕುರಿ, ಮೇಕೆಗಳಿಂದ ಕೋವಿಡ್–19 ಹರಡುವುದಿಲ್ಲ. ರೈತರು ಯಾವುದೇ ಆತಂಕ ಇಲ್ಲದೆ ಕುರಿ, ಮೇಕೆಗಳನ್ನು ಸಾಕಬಹುದು. ಸಾರ್ವಜನಿಕರು ಮಾಂಸ ಸೇವಿಸಬಹುದು’ ಎಂದು ಪಶುಪಾಲನೆ ಇಲಾಖೆ ಉಪನಿರ್ದೇಶಕ ಡಾ.ಕೆ.ಜಿ.ನಂದೀಶ್ ತಿಳಿಸಿದ್ದಾರೆ.


ಕುರಿಗಳು

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು