ಗುರುವಾರ , ಜುಲೈ 29, 2021
21 °C

ಜೂನ್‌ 8ರ ನಂತರವೂ ಉಡುಪಿ ಕೃಷ್ಣಮಠದಲ್ಲಿ ದೇವರ ದರ್ಶನ ಇಲ್ಲ: ಅದಮಾರು ಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜೂನ್‌ 8ರ ನಂತರ ರಾಜ್ಯದಲ್ಲಿ ದೇವಸ್ಥಾನಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. ಆದರೆ, ಕೃಷ್ಣಮಠದಲ್ಲಿ 20 ಅಥವಾ 30 ದಿನಗಳ ನಂತರ ಪರಿಸ್ಥಿತಿ ನೋಡಿಕೊಂಡು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದರು.

ದರ್ಶನಕ್ಕೆ ಅವಕಾಶ ನೀಡಿದ ಕೂಡಲೇ ಬೆಂಗಳೂರು ಸೇರಿದಂತೆ ದೂರದೂರುಗಳಿಂದ ಭಕ್ತರು ಕೃಷ್ಣಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಭಕ್ತರ ಆರೋಗ್ಯ ಹಾಗೂ ಮಠದ ಸಿಬ್ಬಂದಿಯ ಆರೋಗ್ಯದ ದೃಷ್ಟಿಯಿಂದ ತಡವಾಗಿ ದೇವಸ್ಥಾನದ ಬಾಗಿಲು ತೆರೆಯಲು ನಿರ್ಧರಿಸಲಾಗಿದೆ ಎಂದು ಶ್ರೀಗಳು ತಿಳಿಸಿದರು.

ಕೃಷ್ಣಮಠದಲ್ಲಿ ಅನೂಚಾನವಾಗಿ ಕೆಲವು ಪದ್ಧತಿಗಳು ನಡೆದುಕೊಂಡು ಬಂದಿದ್ದು, ಯತಿಗಳೇ ಪೂಜೆ ಮಾಡುತ್ತಿದ್ದಾರೆ. ಹಾಗಾಗಿ, ಪರಂಪರೆ ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು