ಶುಕ್ರವಾರ, ಜನವರಿ 24, 2020
16 °C

ಎಇಇ ಹುದ್ದೆಗೆ ‌ನೇರ ನೇಮಕಾತಿ ಇಲ್ಲ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ‘ವಿದ್ಯುತ್‌ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 2 ಸಾವಿರ ಎಂಜಿನಿಯರ್‌ಗಳ ಭವಿಷ್ಯದ ದೃಷ್ಟಿಯಿಂದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳ ಹುದ್ದೆಗಳಿಗೆ ನೇರ ನೇಮಕಾತಿ ರದ್ದುಪಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ನಗರದ ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಎಂಜನಿಯರ್‌ಗಳ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2020ರ ಕ್ಯಾಲೆಂಡರ್‌ ಹಾಗೂ ದಿನಚರಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

‘9ರಿಂದ 13 ವರ್ಷಗಳ ಕಾಲ ನಿಗಮದಲ್ಲಿ ಸೇವೆ ಸಲ್ಲಿಸುತ್ತಿರುವ ಸಹಾಯಕ ಎಂಜಿನಿಯರ್‌ಗಳಿಗೆ ಪದೊನ್ನತಿ ನೀಡಲು ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ನಿರ್ಧಾರವನ್ನು ಶೀಘ್ರದಲ್ಲೇ ಕಾರ್ಯರೂಪಕ್ಕೆ ತರಲಾಗುವುದು’ ಎಂದು ತಿಳಿಸಿದರು.

ಶಿಕ್ಷಣ ತಜ್ಞ ಪ್ರೊ. ಗುರುರಾಜ್‌ ಕರಜಗಿ ಉಪನ್ಯಾಸ ನೀಡಿದರು.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು