ಗುರುವಾರ , ಜುಲೈ 16, 2020
22 °C

5 ರಾಜ್ಯಗಳಿಗೆ ವಿಮಾನ ಸಂಚಾರ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವುದರಿಂದ ಮಹಾರಾಷ್ಟ್ರ, ಗುಜರಾತ್‌, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳಿಗೆ ಕರ್ನಾಟಕದ ಜತೆ ಸಂಪರ್ಕಿಸುವ ವಿಮಾನಗಳ ಸಂಚಾರವನ್ನು ತಕ್ಷಣದಿಂದಲೇ ನಿರ್ಬಂಧಿಸಲಾಗಿದೆ.

ಮುಂದಿನ ಆದೇಶವನ್ನು ಹೊರಡಿಸುವವರೆಗೂ ಈ ನಿರ್ಬಂಧ ಜಾರಿಯಲ್ಲಿ ಇರುತ್ತದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಆದರೆ, ಇದಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಕಚೇರಿ, ವಿಮಾನ ಸಂಚಾರ ರದ್ದುಪಡಿಸುವುದಿಲ್ಲ. ಬದಲಿಗೆ ವಿಮಾನಗಳ ಹಾರಾಟದ ಸಂಖ್ಯೆ ಕಡಿಮೆಗೊಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದೆ.

ಮಹಾರಾಷ್ಟ್ರದಿಂದ ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿರುವುದರಿಂದ ಪರಿಸ್ಥಿತಿ ನಿಭಾಯಿಸಲು ಕಷ್ಟವಾಗುತ್ತದೆ.  ಪರೀಕ್ಷೆ ಮಾಡಿ ಕ್ವಾರಂಟೈನ್‌ನಲ್ಲಿ ಇಡಲು ಸ್ಥಳವೇ ಇಲ್ಲವಾಗಿದೆ. ಈಗ ಕ್ವಾರಂಟೈನ್‌ನಲ್ಲಿ ಇರುವವರು ಅವಧಿ ಮುಗಿಸಿ ಮನೆಗೆ ಹೋದ ಬಳಿಕ ಹೊರ ರಾಜ್ಯಗಳಿಂದ ಜನರನ್ನು ಕರೆ ತರಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು